ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರಿಗೆ ಜಾಮೀನು ಲಭಿಸುತ್ತಿದ್ದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.
ಬೆನ್ನು ನೋವಿನ ನೆಪ ಹೇಳಿ ಮಧ್ಯಂತರ ಜಾಮೀನು ಪಡೆದು ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ನಟ ಈಗ ಶಸ್ತ್ರಚಿಕಿತ್ಸೆ ಇಲ್ಲದೆಯೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ 7 ಮಂದಿಗೆ ಜಾಮೀನು
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಬಳಿಕ ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಈಗ ಜಾಮೀನು ಲಭ್ಯವಾಗಿದೆ.

ಹಿಂದೆ ಹಳ್ಳಿಗಳಲ್ಲಿ ಪಂಚಾಯಿತಿ ಕಟ್ಟೆನೆ ವಾಸಿ, ಎಲ್ಲರ ಸಮ್ಮುಖದಲ್ಲಿ ವಿಚಾರಣೆ ನಡೆಯುತ್ತಿತ್ತು. ಈಗ ಕದ್ದು ಮುಚ್ಚಿ ವ್ಯವಹಾರ ಮಾಡಿ ಕೇಸ್ ಕ್ಲೋಸ್ ಮಾಡ್ತಾರೆ. ನ್ಯಾಯಾಂಗದಿಂದ ನ್ಯಾಯ ಸಿಗುವ ಭಾರವಸೆಗಳು ಮುಗಿದು ಹೋಯಿತು.