ನ್ಯಾಯಾಂಗ ನಿಂದನೆ ಪ್ರಕರಣ : ಬೇಷರತ್‌ ಕ್ಷಮೆ ಯಾಚಿಸಿದ ವಿವೇಕ್‌ ಅಗ್ನಿಹೋತ್ರಿ

Date:

ನ್ಯಾಯಮೂರ್ತಿ ಎಸ್‌ ಮುರಳಿಧರ್‌ ಕುರಿತು ಟ್ವೀಟ್‌ ಮಾಡಿದ್ದ ವಿವೇಕ್‌

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಹೈಕೋರ್ಟ್‌

ನ್ಯಾಯಾಂಗ ನಿಂದನೆಯ ಆರೋಪ ಎದುರಿಸುತ್ತಿದ್ದ ವಿವಾದಾತ್ಮಕ ಕಾಶ್ಮೀರ್‌ ಫೈಲ್ಸ್‌ ಚಿತ್ರದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ, ಸೋಮವಾರ ದೆಹಲಿ ಹೈಕೋರ್ಟ್‌ಗೆ ಹಾಜರಾಗಿ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

ಭೀಮಾ ಕೋರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿ ಗೃಹಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖ ಅವರನ್ನು ಬಿಡುಗಡೆ ಮಾಡುವಂತೆ 2018ರಲ್ಲಿ ದೆಹಲಿ ಹೈಕೋರ್ಟ್‌ ಆದೇಶ ನೀಡಿತ್ತು. ಈ ತೀರ್ಪು ಪ್ರಕಟಿಸಿದ್ದ ದೆಹಲಿ ಹೈಕೋರ್ಟ್‌ನ ಅಂದಿನ ನ್ಯಾಯಮೂರ್ತಿ ಎಸ್‌ ಮುರಳಿಧರ್‌ ಅವರು ಪಕ್ಷಪಾತಿಯಾಗಿ ನಡೆದುಕೊಂಡಿದ್ದಾರೆ ಎಂದು ವಿವೇಕ್‌ ಅಗ್ನಿಹೋತ್ರಿ ಮತ್ತು ಕೆಲವರು ಟ್ವೀಟ್‌ ಮಾಡಿದ್ದರು.

ಇದಾದ ಬೆನ್ನಲ್ಲೇ ದೆಹಲಿ ಹೈಕೋರ್ಟ್‌, ವಿವೇಕ್‌ ಸೇರಿದಂತೆ 6 ಜನಗಳ ಮೇಲೆ ಸ್ವಯಂ ಪ್ರೇರಿತ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಸೋಮವಾರ ನಡೆದ ವಿಚಾರಣೆಗೆ ಖುದ್ದು ಹಾಜರಾಗಿದ್ದ ವಿವೇಕ್‌, ತಮ್ಮ ಟ್ವೀಟ್‌ ಕುರಿತು ವಿಷಾದ ವ್ಯಕ್ತ ಪಡಿಸಿ, ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುದೀಪ್, ಪ್ರಶ್ನೆ ಎದುರಿಸಲು ಸಜ್ಜಾಗಿ ಎಂದ ಪ್ರಕಾಶ್ ರಾಜ್

ನಿರ್ದೇಶಕನ ಕ್ಷಮಾಪಣಾ ಪತ್ರವನ್ನು ಸ್ವೀಕರಿಸಿರುವ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್‌ ಮೃದುಲ್‌ ಮತ್ತು ವಿಕಾಸ್‌ ಮಹಾಜನ್‌, ಮುಂದಿನ ದಿನಗಳಲ್ಲಿ ಜಾಗರೂಕತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿದ್ದು, ಪ್ರಕರಣದಿಂದ ಖುಲಾಸೆಗಳಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಆನಂದ್‌ ರಂಗನಾಥನ್‌ ಅವರಿಗೂ ಕ್ಷಮೆ ಯಾಚಿಸುವಂತೆ ತಿಳಿಸಿದೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...

ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿದ ಅಭಿಮಾನಿಗಳು: ಭಯಭೀತರಾಗಿ ಎದ್ದುಬಿದ್ದು ಓಡಿದ ಪ್ರೇಕ್ಷಕರು

ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್‌ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ...

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ; ನಟ ದರ್ಶನ್‌ಗೆ ಪೊಲೀಸರ ನೋಟಿಸ್

ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರಿಗೆ ರಾಜರಾಜೇಶ್ವರಿ...