ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Date:

ಮಂಡ್ಯದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತುಗಳನ್ನು ಆಡಿರುವ ಆರೋಪದ ಮೇಲೆ ಸ್ಯಾಂಡಲ್‌ವುಡ್‌ ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ದರ್ಶನ್ ವಿರುದ್ಧ ಮಹಿಳಾ ಸಂಘಟನೆ ಲಿಖಿತ ದೂರು ನೀಡಿದ್ದು, “ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ” ಎನ್ನುವ ಮಾತುಗಳನ್ನು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ದರ್ಶನ್ ಹೇಳಿಕೆ ನೀಡಿದ್ದಾರೆ. ಆ ಮೂಲಕ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಹಾಗಾಗಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ‘ದರ್ಶನ್ ಬೆಳ್ಳಿ ಪರ್ವ’ ಕಾರ್ಯಕ್ರಮದಲ್ಲಿ ದರ್ಶನ್ ಈ ಹೇಳಿಕೆ ನೀಡುವ ಮೂಲಕ ಎಡವಟ್ಟು ಮಾಡಿಕೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮ್ಮ ಸಿನಿಮಾ ಬದುಕಿನ ಬಗ್ಗೆ ಮಾತನಾಡುವ ವೇಳೆ, “ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ.. ಹೋಗ್ರೋ ಇವರಜ್ಜೀನ ಬಡಿಯಾ” ಎಂದು ದರ್ಶನ್ ಹೇಳಿದ್ದರು. ಈ ವಿಚಾರ ಮಹಿಳೆಯರ ಕೋಪಕ್ಕೆ ಕಾರಣವಾಗಿದೆ. ಗೌಡತಿಗರ ಸೇನೆ ಎಂಬ ಮಹಿಳಾ ಸಂಘಟನೆ ಈ ದೂರು ನೀಡಿದೆ. ಬೆಂಗಳೂರಿನ ಕಾವೇರಿ ಭವನದಲ್ಲಿರುವ ಮಹಿಳಾ ಆಯೋಗದ ಕಚೇರಿಗೆ ತೆರಳಿದ ಗೌಡತಿಗರ ಸೇನೆಯ ಪದಾಧಿಕಾರಿಗಳು, ನಟ ದರ್ಶನ್ ವಿರುದ್ಧ ದೂರು ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಹೈಕೋರ್ಟ್‌ ಆದೇಶದಂತೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬಾಸ್ಟ್‌: ಕೃಷಿ ಸಚಿವ

ಕಾಟೇರ ಟೈಟಲ್​ ವಿಚಾರವಾಗಿ ನಿರ್ದೇಶಕ ಉಮಾಪತಿಗೆ ‘ತಗಡು, ಗುಮ್ಮಿಸ್ಕೊತಿಯಾ’ ಎಂದು ಹೇಳಿಕೆ ನೀಡಿದ್ದ ದರ್ಶನ್​ ವಿರುದ್ಧ ನಿನ್ನೆ ಕರ್ನಾಟಕ ಪ್ರಜಾಪರ ವೇದಿಕೆ ಕೂಡ ಕರ್ನಾಟಕ ಫಿಲ್ಮ್​ ಚೇಂಬರ್​ನಲ್ಲಿ ದೂರು ಸಲ್ಲಿಸಿದೆ. ರಾಜ್ಯಾಧ್ಯಕ್ಷ ಕನ್ನಡ ಶಫಿ ಅವರಿಂದ ದೂರು ನೀಡಿದ್ದಲ್ಲದೆ, ದರ್ಶನ್ ಈ ಹೇಳಿಕೆ ನೀಡಿದ್ದಕ್ಕೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

ಇತ್ತೀಚಿಗೆ ಮಲಯಾಳಂನಲ್ಲಿ ಸೂಪರ್‌ ಡೂಪರ್‌ ಹಿಟ್‌ ಆಗಿದ್ದ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ...

ಬಿಸಿಗಾಳಿ | ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಶಾರೂಖ್ ಖಾನ್

ಮಂಗಳವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಅಪಘಾತದಲ್ಲಿ ನಟಿ ಪವಿತ್ರ ಜಯರಾಂ ನಿಧನರಾದ ಬೆನ್ನಲ್ಲೇ ಸ್ನೇಹಿತ, ನಟ ಚಂದ್ರಕಾಂತ್ ಆತ್ಮಹತ್ಯೆ

ಕಳೆದ ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಮೆಹಬೂಬ್‌ ನಗರದಲ್ಲಿ...

ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್...