ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ನಟ ಪ್ರಕಾಶ್ ರಾಜ್ ಖಂಡನೆ

Date:

Advertisements

ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ. “ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ” ಎಂದು ಆಗ್ರಹಿಸಿದ್ದಾರೆ.

ಯೂಟ್ಯೂಬರ್‌ಗಳ ಮೇಲಿನ ದಾಳಿಯನ್ನು ಖಂಡಿಸಿ ‘ಎಕ್ಸ್‌‘ನಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಕಾಶ್‌ ರಾಜ್, “ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿಂದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ” ಎಂದು ಒತ್ತಾಯಿಸಿದ್ದಾರೆ.

“ಈ ಗೂಂಡಾಗಳ ಹಿಂದೆ ಯಾರಿದ್ದಾರೆ. ಯಾರು ಅವರನ್ನು ಕಳಿಸಿ, ಹೊಡೆಸುತ್ತಿದ್ದಾರೆ. ಅನುಮಾನ ಹೆಚ್ಚುತ್ತಿದೆ. ದಯವಿಟ್ಟು ಪೊಲೀಸರು ಗೂಂಡಾಗಳನ್ನು ಬಂಧಿಸಬೇಕು. ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ಕ್ರಮ ಕೈಗೊಳ್ಳಬೇಕು. ನ್ಯಾಯ ಕೇಳುವುದು ನಮ್ಮ ಹಕ್ಕು-ಕರ್ತವ್ಯ” ಎಂದು ಹೇಳಿದ್ದಾರೆ.

Advertisements

ಧರ್ಮಸ್ಥಳದಲ್ಲಿ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳಾದ ಅಜಯ್ ಅಂಚನ್, ಅಭಿಷೇಕ್, ವಿಜಯ್ ಮತ್ತು ಮತ್ತೋರ್ವ ಯುವಕನ ಮೇಲೆ ಬುಧವಾರ ಗೂಂಡಾಗಳು ಹಲ್ಲೆ ನಡೆಸಿದ್ದು, ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಯೂಟ್ಯೂಬರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯೂಟ್ಯೂಬರ್‌ಗಳ ಮೇಲಿನ ದಾಳಿಯ ನಂತರ, ಧರ್ಮಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾರವಣ ಸೃಷ್ಟಿಯಾಗಿದೆ. ಹಲ್ಲೆಗೈದ ದುಷ್ಕರ್ಮಿಗಳ ವಿರುದ್ಧ ಧರ್ಮಸ್ಥಳ ಮತ್ತು ಉಜಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ...

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X