ಸೇನೆಯ ಗುಟ್ಟು ಬಿಟ್ಟುಕೊಟ್ಟಿತೇ ʼಧುರಂಧರ್ʼ?: ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ಪ್ರಶ್ನೆ

Date:

ನಟ ರಣವೀರ್ ಸಿಂಗ್ ಅಭಿನಯದ ʼಧುರಂಧರ್ 2ʼ ಚಿತ್ರದಲ್ಲಿ ಸಶಸ್ತ್ರ ಪಡೆಗಳ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಲಾಗಿದೆ ಎಂಬ ಆರೋಪವನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -

ಸಶಸ್ತ್ರ ಸೀಮಾ ಬಲ್ (SSB) ನ ಹೆಡ್ ಕಾನ್ಸ್‌ಟೇಬಲ್ ದೀಪಕ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಚಿತ್ರದಲ್ಲಿ ಸೇನೆಯ ಸೂಕ್ಷ್ಮ ವಿವರಗಳನ್ನು ತೋರಿಸಿರುವುದರಿಂದ ಇದು ದೇಶದ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಬಹುದು ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ವಿಭಾಗೀಯ ಪೀಠವು ಕೆಲ ಪ್ರಮುಖ ಅವಲೋಕನಗಳನ್ನು ಮಾಡಿ ಆದೇಶ ಹೊರಡಿಸಿದೆ.

“ಚಿತ್ರವು ಕಾಲ್ಪನಿಕ ಕಥೆ ಮತ್ತು ಮನರಂಜನೆಗಾಗಿ ಮಾಡಲ್ಪಟ್ಟಿದ್ದರೂ, ಅದರ ಪ್ರಭಾವವನ್ನು ಅಲ್ಲಗಳೆಯುವಂತಿಲ್ಲ. ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಎತ್ತಿರುವ ಕಳವಳಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದಿದೆ.

gvpsomk5a7u7kDurandha 1

ʼಧುರಂಧರ್: ದಿ ರಿವೆಂಜ್ʼ ಚಿತ್ರವು ಅಧಿಕೃತ ರಹಸ್ಯಗಳ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆಯೇ ಎಂಬ ಆರೋಪದ ಬಗ್ಗೆ ನಿಗಾ ವಹಿಸುವಂತೆ ನ್ಯಾಯಾಲಯವು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ನಿರ್ದೇಶಿಸಿದೆ.

ಚಿತ್ರದಲ್ಲಿ ಕೆಲವು ನಿರ್ದಿಷ್ಟ ಕಾರ್ಯಾಚರಣೆಗಳ ಸ್ಥಳಗಳು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳು ಹಾಗೂ ಹುತಾತ್ಮ ಯೋಧರನ್ನು ಹೋಲುವ ಪಾತ್ರಗಳನ್ನು ಅತ್ಯಂತ ಸ್ಪಷ್ಟವಾಗಿ ಚಿತ್ರಿಸಲಾಗಿದೆ. ಇದು ದೇಶದ ಭದ್ರತೆ ಮತ್ತು ಸಮಗ್ರತೆಯ ದೃಷ್ಟಿಯಿಂದ ಹಿತಕರವಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ: ಒಳಮೀಸಲಾತಿಯ ಮೂರು ವರ್ಷಗಳ ಹಿನ್ನೋಟ!

ವಿಷಯದ ಸೂಕ್ಷ್ಮತೆಯನ್ನು ಪರಿಗಣಿಸಿ, ಅರ್ಜಿದಾರರ ಮನವಿಯನ್ನು ಒಂದು ಪ್ರಾತಿನಿಧ್ಯವಾಗಿ ಸ್ವೀಕರಿಸಿ, ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಕೋರ್ಟ್ ಸಚಿವಾಲಯ ಹಾಗೂ ಸೆನ್ಸಾರ್ ಮಂಡಳಿಗೆ ಸೂಚಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 1’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ತಲಾ 1,000 ಕೋಟಿ ರೂಪಾಯಿಗಳಿಗೂ ಅಧಿಕ ಕಲೆಕ್ಷನ್ ಮಾಡಿವೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...