ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

Date:

ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ ಮುರುಗನ್‌, “ಪಕ್ಷದ ಶಿಸ್ತು ಉಲ್ಲಂಘಿಸಿ ಅಪಕೀರ್ತಿ ತಂದಿರುವ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪ್ರಥಾಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದ ವಜಾ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇತ್ತೀಚಿಗಷ್ಟೆ ಕೃಷ್ಣಮೂರ್ತಿ ಅವರು ತಮ್ಮ ಸಾರ್ವಜನಿಕ ಭಾಷಣವೊಂದರಲ್ಲಿ ಖುಷ್ಬು ಅವರನ್ನು ‘ಹಳೆಯ ಪಾತ್ರೆ’ ಎಂದು ಹೀಯಾಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಕೃಷ್ಣಮೂರ್ತಿ ಅವರ ಹೇಳಿಕೆಯ ಬಗ್ಗೆ ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಖುಷ್ಬು ಅವರು, “ಈ ರೀತಿಯ ಹೇಳಿಕೆಗಳು ಡಿಎಂಕೆ ನಾಯಕರ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತವೆ. ಈ ರೀತಿ ಮಾತನಾಡುವವರು ಆ ಪಕ್ಷದಲ್ಲಿ ಅನೇಕರಿದ್ದಾರೆ. ಮಹಿಳೆಯರನ್ನು ನಿಂದಿಸುವುದು, ಅವರ ಬಗ್ಗೆ ಅಶ್ಲೀಲವಾದ ಅಗ್ಗದ ಮಾತುಗಳನ್ನುಆಡುವುದರಿಂದ ಅವರಿಗೆ ಉತ್ತಮ ಸ್ಥಾನಮಾನಗಳು ಸಿಗಬಹುದು. ಮುಖ್ಯಮಂತ್ರಿ ಸ್ಟಾಲಿನ್‌ ಅವರೇ ನಿಮ್ಮ ಕುಟುಂಬದ ಮಹಿಳೆಯರ ಬಗ್ಗೆ ಇಂತಹ ಹೇಳಿಕೆಗಳನ್ನು ನೀವು ಸ್ವೀಕರಿಸುತ್ತೀರಾ?” ಎಂದು ಪ್ರಶ್ನಿಸಿದ್ದರು.

“ನಿಮ್ಮ ಕಾರ್ಯಕರ್ತರು ಕಲ್ಲು ತೂರಾಟ ಮಾಡುತ್ತಾರೆ ಮತ್ತು ವಿನಾಶವನ್ನು ಸೃಷ್ಟಿಸುತ್ತಾರೆ. ನಿಮಗೆ ಅರ್ಥವಾಗದ ಸಂಗತಿಯೆಂದರೆ, ಅವರು ನನ್ನನ್ನು ಮಾತ್ರವಲ್ಲ, ನಿಮ್ಮನ್ನು ಮತ್ತು ನಿಮ್ಮ ತಂದೆಯಂತಹ ಮಹಾನ್ ನಾಯಕನನ್ನು ಅವಮಾನಿಸುತ್ತಾರೆ. ಆದರೂ ಇಂತಹವರಿಗೆ ಹೆಚ್ಚು ಸ್ಥಾನಮಾನಗಳನ್ನು ನೀಡುತ್ತೀರಿ. ನಿಮ್ಮ ಪಕ್ಷ ಅಸಭ್ಯ ಗೂಂಡಾಗಿರಿಗೆ ಸುರಕ್ಷಿತ ತಾಣವಾಗುತ್ತಿದೆ. ಇದು ನಾಚಿಕೆಗೇಡಿನ ಸಂಗತಿ” ಎಂದು  ಆಕ್ರೋಶ ಹೊರಹಾಕಿದ್ದರು.

ಶಿವಾಜಿ ಕೃಷ್ಣಮೂರ್ತಿ ಕೆಲವು ದಿನಗಳ ಹಿಂದಷ್ಟೆ ರಾಜ್ಯಪಾಲರ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದರು. ಆಗ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಅವರು ಕ್ಷಮೆಯಾಚಿಸಿದ ನಂತರ ಅಮಾನತನ್ನು ಹಿಂಪಡೆಯಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....