ಡಾಲಿ ಮದುವೆ: ದರ್ಶನ್‌ಗೆ ಇಲ್ವಾ ಆಹ್ವಾನ? ಧನಂಜಯ್ ಹೇಳಿದ್ದೇನು?

Date:

ಬಡವರ ಮಗನಾಗಿ ಬೆಳೆದ ನಟ ಡಾಲಿ ಧನಂಜಯ್ ಅದ್ದೂರಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ರಾಜಕೀಯ ಮತ್ತು ಸಿನಿಮಾ ರಂಗದ ನಾಯಕರು, ಪ್ರಮುಖರನ್ನು ಆಹ್ವಾನಿಸುವುದರಲ್ಲಿ ‘ಬ್ಯುಸಿ’ ಆಗಿದ್ದಾರೆ. ಆದರೆ, ಈವರೆಗೆ ನಟ ದರ್ಶನ್‌ ಅವರಿಗೆ ಧನಂಜಯ್ ಆಹ್ವಾನ ಪತ್ರಿಕೆ ನೀಡಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಅವರನ್ನು ಆಹ್ವಾನಿಸಲು ಧನಂಜಯ್ ಹಿಂದೇಟು ಹಾಕುತ್ತಿದ್ದಾರೆಯೇ ಎಂಬ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಸ್ವತಃ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.

- Advertisement -

ಬುಧವಾರ ಪತ್ರಿಕಾಗೋಷ್ಠಿ ನಡೆಸಿರುವ ಧನಂಜಯ್ ತಮ್ಮನ್ನು ವಿವಾಹವಾಗುತ್ತಿರುವ ಧನ್ಯತಾ ಅವರನ್ನು ಪರಿಚಯಿಸಿಕೊಟ್ಟಿದ್ದಾರೆ. ಈ ವೇಳೆ, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಧನಂಜಯ್, “ಎಲ್ಲರನ್ನು ಮದುವೆ ಕರೆಯುತ್ತಿದ್ದೇನೆ. ದರ್ಶನ್ ಅವರನ್ನೂ ಭೇಟಿ ಮಾಡಿ, ಕರೆಯಲು ಪ್ರಯತ್ನ ಮಾಡುತ್ತಿದ್ದೇಎ. ಆದರೆ, ಅವರನ್ನು ರೀಚ್ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಅಂದಹಾಗೆ, ರೇಣುಕಾಸ್ವಾಮಿ ಕೊಲೆಯನ್ನು ಖಂಡಿಸಿದ್ದ ಚಿತ್ರರಂಗ ಪ್ರಮುಖರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ದರ್ಶನ್ ಜೈಲು ಸೇರಿದ್ದ ಸಮಯದಲ್ಲಿ ಪ್ರತಿಕ್ರಿಯಿಸಿದ್ದ ಧನಂಜಯ್, “ಕೊಲೆ ಪ್ರಕರಣದ ಬಗ್ಗೆ ಏನು ಮಾತನಾಡುವುದು? ಅಲ್ಲೊಂದು ಜೀವ ಹೋಗಿದೆ. ಒಂದು ತಪ್ಪು ನಡೆದಿದೆ. ರೇಣುಕಾಸ್ವಾಮಿ ತಂದೆ ತಾಯಿ, ಪತ್ನಿಯ ಮುಖ ನೋಡಿದಾಗ ಖಂಡಿತಾ ಬೇಜಾರಾಗುತ್ತದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ದರ್ಶನ್ ಸಹೋದರನಾಗಿ ಹೇಳುತ್ತಿದ್ದೇನೆ, ಅವರಿಂದ ತಪ್ಪಾಗಿದ್ದರೆ ಶಿಕ್ಷೆಯಾಗಲಿ” ಎಂದಿದ್ದರು.

ಹೀಗಾಗಿ, ಧನಂಜಯ್ ಅವರ ಹಿಂದಿನ ಹೇಳಿಕೆಯನ್ನು ಈಗ ತಳುಕು ಹಾಕಿಕೊಂಡು ಧನಂಜಯ್ ಅವರು ಉದ್ದೇಶಪೂರ್ವಕವಾಗಿಯೇ ತಮ್ಮ ವಿವಾಹಕ್ಕೆ ದರ್ಶನ್‌ ಅವರನ್ನು ಆಹ್ವಾನಿಸಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಆದರೆ, ದರ್ಶನ್ ಅವರನ್ನು ಆಹ್ವಾನಿಸುವ ಪ್ರಯತ್ನ ಮಾಡಿದ್ದೇನೆ ಎಂದು ಧನಂಜಯ್ ಹೇಳಿದ್ದಾರೆ.

ಫೆಬ್ರವರಿ 16ರಂದು ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಮೈಸೂರಿನಲ್ಲಿ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...