ವರದಕ್ಷಿಣೆ ಕಿರುಕುಳ ಆರೋಪ | ನಿರ್ದೇಶಕ ಎಸ್.ನಾರಾಯಣ್, ಪತ್ನಿ , ಪುತ್ರನ ವಿರುದ್ಧ ಎಫ್‌ಐಆರ್

Date:

Advertisements

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ ಹಾಗೂ ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಎಲ್ಲ ಹೆಣ್ಮಕ್ಕಳು ಮಾಡೋದು ಇದನ್ನೇ!

ಒಂದು ವರ್ಷದ ಹಿಂದೆ ಸೊಸೆ ಮನೆ ಬಿಟ್ಟು ಹೋಗಿದ್ದಾರೆ. ಈಗ ವರದಕ್ಷಿಣೆ ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ ಹಗುರವಾಗಿ ಮಾತನಾಡಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ತಳ್ಳಿ ಹಾಕಿರುವ ನಾರಾಯಣ್‌, “ಪವಿತ್ರಾ ಮನೆ ಬಿಟ್ಟು ಹೋಗಿ 14 ತಿಂಗಳಾಗಿವೆ. ಮದುವೆ ಆಗಿ ಒಂದು ತಿಂಗಳು ಮಾತುಕತೆ ಸಹ ಇರಲಿಲ್ಲ. ಮನೆ ಬಿಟ್ಟು ಹೋದ ಕೂಡಲೇ ಹೋಗಿ ಕಂಪ್ಲೆಂಟ್ ಕೊಡಬಹುದಿತ್ತಲ್ಲ. ಯಾಕೆ ಇಷ್ಟು ತಡ ಮಾಡಿದ್ದು, ವರದಕ್ಷಿಣೆ ಪಿಡುಗು ತೊಲಗಬೇಕು ಎಂದು ಸಿನಿಮಾ ಮಾಡಿದವನು ನಾನು, ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ವರದಕ್ಷಿಣೆ ಕೇಸು ಎನ್ನುವುದನ್ನು ಕೆಲ ಮಹಿಳೆಯರು ಅಸ್ತ್ರವಾಗಿ ಬಳಸುತ್ತಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X