ಡಬ್ಬಿಂಗ್‌ ಹಂತ ತಲುಪಿದ ʼಭೀಮʼ

Date:

ದುನಿಯಾ ವಿಜಯ್‌ ನಿರ್ದೇಶನದ ಚಿತ್ರ

ವರ್ಷಾಂತ್ಯಕ್ಕೆ ತೆರೆಗೆ ಬರಲಿರುವ ʼಭೀಮʼ

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ದುನಿಯಾ ವಿಜಯ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಭೀಮʼ ಚಿತ್ರದ ಕೊನೆಯ ಹಂತದ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಈ ನಡುವೆ ಡಬ್ಬಿಂಗ್‌ ಪ್ರಕ್ರಿಯೆ ಕೂಡ ಆರಂಭವಾಗಿದೆ. ದುನಿಯಾ ವಿಜಯ್‌ ತಮ್ಮ ಪಾತ್ರಕ್ಕೆ ಡಬ್‌ ಮಾಡುತ್ತಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ್ಯಕ್ಷನ್ ದೃಶ್ಯವೊಂದರ ಡಬ್ಬಿಂಗ್‌ನಲ್ಲಿ ತೊಡಗಿಕೊಂಡಿರುವ ದುನಿಯಾ ವಿಜಯ್‌, “ನಮ್ಮ ಹುಡುಗರನ್ನು ಮುಟ್ಟಿದ್ರೆ ನಾನು ಮೆಂಟಲ್‌ ಆಗ್ತೀನಿ” ಎಂದು ಖಡಕ್‌ ಡೈಲಾಗ್‌ ಹೇಳಿರುವ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ʼಸಲಗʼ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳುವ ಮೂಲಕ ಯಶಸ್ವಿ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ದುನಿಯಾ ವಿಜಯ್‌, ಸದ್ಯ ʼಭೀಮʼ ಚಿತ್ರವನ್ನೂ ನಿರ್ದೇಶಿಸುತ್ತಿದ್ದಾರೆ. ಕ್ರೈಂ, ಆ್ಯಕ್ಷನ್ ಮತ್ತು ಥ್ರಿಲ್ಲರ್‌ ಕಥಾಹಂದರವುಳ್ಳ ಈ ಚಿತ್ರದಲ್ಲಿ ರಂಗಭೂಮಿ ಹಿನ್ನೆಲೆಯ ನಟಿ ಅಶ್ವಿನಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗೋಪಾಲ ಕೃಷ್ಣ ದೇಶಪಾಂಡೆ, ರಾಘು ಶಿವಮೊಗ್ಗ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಚರಣ್‌ ರಾಜ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, “ಆಡಿ ಬಾ ಮಗನೇ ʼಭೀಮʼ ನೋಡುವೆ ಕಣ್ಣಿನ ತುಂಬಾ” ಹಾಡು ಈಗಾಗಲೇ ಜನಪ್ರಿಯತೆ ಗಳಿಸಿದೆ. ದುನಿಯಾ ವಿಜಯ್‌ ಅವರೇ ಚಿತ್ರಕಥೆ ಬರೆದು, ನಿರ್ದೇಶಿಸಿ, ನಟಿಸಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ್‌ ಬಂಡವಾಳ ಹೂಡಿದ್ದಾರೆ. ಈ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಸದ್ಯ ರಾಜ್ಯದಲ್ಲಿ ನಟ ದರ್ಶನ್ ಅವರ ಬಂಧನ ಸುದ್ದಿಯಲ್ಲಿದೆ. ತಮ್ಮ ಆಪ್ತೆ...

ಮೈಸೂರು | ಕೊಲೆ ಪ್ರಕರಣ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಸೇರಿ 10...

ಪ್ರಮಾಣವಚನ ಸ್ವೀಕರಿಸಿದ ಗಂಟೆಯಲ್ಲೇ ನನಗೆ ಕೇಂದ್ರ ಮಂತ್ರಿ ಸ್ಥಾನ ಬೇಡವೆಂದ ಸುರೇಶ್ ಗೋಪಿ

ನರೇಂದ್ರ ಮೋದಿ ಮೂರನೇ ಸರ್ಕಾರದಲ್ಲಿ ರಾಜ್ಯ ಖಾತೆಯ ಮಂತ್ರಿಯಾಗಿ ಪ್ರಮಾಣ ವಚನ...

ಓದುಗರ ಪತ್ರ | ನಿಷೇಧ, ದಾಳಿ – ಫ್ಯಾಶಿಸ್ಟರ ವರಸೆಯೇ ಹೊರತು ಧೀಮಂತರದ್ದಲ್ಲ

‘ಹಮಾರೆ ಬಾರಹ್’ ಎಂಬ ಹೆಸರಿನ ಹಿಂದೂಸ್ತಾನೀ ಚಲನಚಿತ್ರವನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ...