ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

Date:

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.

- Advertisement -

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್ ಅವರನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿಸಿದರು ಎನ್ನಲಾಗಿದೆ. ‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿʼ ಸೇರಿದಂತೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಹಲವು ಸಿನಿಮಾಗಳಲ್ಲಿ ಇವರು ಕೆಲಸ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಾಹಸ ನಿರ್ದೇಶನ ಹಾಗೂ ಸಾಹಸ ಕಲಾವಿದನಾಗಿ ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಅವರು ‘ಮಾಸ್ಟರ್​ ಪೀಸ್’, ʼʼಏಕಾಂಗಿʼ, ʼಸೂಪರ್‌ ರಂಗʼ, ʼಗಾಳಿಪಟʼ, ʼಪಾಪ್‌ ಕಾರ್ನ್‌ ಮಂಕಿ ಟೈಗರ್‌ʼ, ʼಬೆಂಗಳೂರು ಡೇಸ್‌ʼ, ʼಆಪರೇಷನ್‌ ಜೀವʼ, ‘ಅಂಗಮಲಿ ಡೈರೀಸ್’(ಮಲಯಾಳಂ), ʼಅಣ್ಣಯ್ಯʼ, ʼನಕ್ಷತ್ರಂ’(ತೆಲುಗು), ʼದಿ ಬಾಡಿ’(ಹಿಂದಿ), ‘ಇರಿದ’(ತಮಿಳು) ಸೇರಿದಂತೆ 900 ಕ್ಕೂ ಹೆಚ್ಚಿನ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದರು.

ಜಾಲಿ ಬಾಸ್ಟಿನ್ ಅವರು 1966ರಲ್ಲಿ ಕೇರಳದಲ್ಲಿ ಜನಿಸಿದ್ದರು. ಅವರು ಬೆಳೆದದ್ದು ಬೆಂಗಳೂರಿನಲ್ಲಿ. ಹೀಗಾಗಿ, ಇಲ್ಲಿಯೇ ಶಿಕ್ಷಣವನ್ನು ಪಡೆದರು. ಆರಂಭದಲ್ಲಿ ಬೈಕ್‌ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದ‌ ಜಾಲಿ ಬಾಸ್ಟಿನ್‌ ಸಿನಿಮಾದಲ್ಲಿ ಬೈಕ್‌ ಸಾಹಸದ ದೃಶ್ಯಗಳನ್ನು ಮಾಡುತ್ತಿದ್ದರು. ರವಿಚಂದ್ರನ್‌ ಅವರ ʼಪ್ರೇಮ ಲೋಕʼ ಸಿನಿಮಾದಲ್ಲಿ ಡ್ಯೂಪ್‌ ಹಾಕಿದ್ದರು. ಈ ಸಮಯದಲ್ಲಿ ಅವರಿಗೆ 17 ವರ್ಷ ಆಗಿತ್ತು.

ಈ ಸುದ್ದಿ ಓದಿದ್ದೀರಾ? ಡಿ.26 ರಂದು ಕರ್ನಾಟಕದಲ್ಲಿ 74 ಹೊಸ ಕೋವಿಡ್​ ಕೇಸ್ ಪತ್ತೆ: ಇಬ್ಬರು ಬಲಿ

‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ಧರಿಸಿದ್ದರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...