ನಟ ಯಶ್‌ನನ್ನು ಹಿಂಬಾಲಿಸಿಕೊಂಡು ಬಂದ ಅಭಿಮಾನಿ: ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಸಾವು

Date:

Advertisements

ಚಿತ್ರನಟ ಯಶ್ 38ನೇ ಹುಟ್ಟಹಬ್ಬದ ಹಿನ್ನೆಲೆ ಬರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಗದಗದ ಸೊರಣಗಿ ಗ್ರಾಮದಲ್ಲಿ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಮೃತಪಟ್ಟಿದ್ದರೆ, ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಈ ನಡುವೆ ಯಶ್ ಆಸ್ಪತ್ರೆಗೆ ಭೇಟಿ ನೀಡಿನ ಗಾಯಾಳುಗಳನ್ನು ಮಾತನಾಡಿಸಿ ವಾಪಸ್‌ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿದೆ.

ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಯುವಕ, ಯಶ್ ಅಭಿಮಾನಿ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.

Advertisements

yash fan

ತನ್ನ ನೆಚ್ಚಿನ ನಟ ಯಶ್ ಅವರನ್ನು ನೋಡಬೇಕು ಎಂದು ಹಿಂಬಾಲಿಸುತ್ತಿದ್ದ ನಿಖಿಲ್ ಸ್ಕೂಟಿ ಗದಗ ಮುಳುಗುಂದ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್​ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಯ ಮತ್ತೊಂದು ಸಾವು ನಟ ಯಶ್​ಗೆ ಆಘಾತ ತಂದಿದೆ.

ಇದನ್ನು ಓದಿದ್ದೀರಾ? ಬ್ಯಾನರ್ ಕಟ್ಟಬೇಡಿ: ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬ ಸದಸ್ಯರನ್ನು ಸಂತೈಸಿದ ನಟ ಯಶ್

ಘಟನೆ ಸಂಬಂಧ ಗದಗ ಎಸ್​​ಪಿ ಬಿ.ಎಸ್​.ನೇಮಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದು,”ಬೈಕ್​ಗೆ ಡಿಕ್ಕಿ ಹೊಡೆದ ಜೀಪ್ ಯಶ್ ಬೆಂಗಾವಲು ವಾಹನ ಅಲ್ಲ. ಕೆಲವು ಮಾಧ್ಯಮಗಳಲ್ಲಿ ಯಶ್ ಬೆಂಗಾವಲು ವಾಹನ ಎಂದು ಸುದ್ದಿ ಬಿತ್ತರಿಸಲಾಗಿದೆ. ಆದರೆ ಅದು ಪೊಲೀಸ್ ಹೆಡ್ ಕ್ವಾರ್ಟರ್​ಗೆ ಹೋಗುತ್ತಿದ್ದ ಜೀಪ್. ನಟ ಯಶ್ ಅವರನ್ನು ಬೈಪಾಸ್ ಹೈವೇಯಿಂದಲೇ ಹುಬ್ಬಳ್ಳಿಗೆ ಸೂಕ್ತ ಭದ್ರತೆಯೊಂದಿಗೆ ಕಳುಹಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

yash fan 1

“ನಟ ಯಶ್ ಅವರ ಬೆಂಗಾವಲು ವಾಹನಕ್ಕೂ ಈ ಅಪಘಾತಕ್ಕೂ ಸಂಬಂಧವಿಲ್ಲ. ನಟ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ. ಮೃತಪಟ್ಟ ಯುವಕನನ್ನು 20 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ನಿಖಿಲ್​ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾರೂ ದಯವಿಟ್ಟು ಇನ್ನು ಮುಂದೆ ಬ್ಯಾನರ್ ಕಟ್ಟಬೇಡಿ. ನನಗೆ ನನ್ನ ಹುಟ್ಟುಹಬ್ಬದ ದಿನ ಬಂತೆಂದರೆ ಭಯ ಶುರುವಾಗಿಬಿಟ್ಟಿದೆ. ಈಗ ನಾನು ಬರುವಾಗಲೂ ಬೈಕ್​ನಲ್ಲಿ ಚೇಸ್ ಮಾಡ್ತಿದ್ರು, ಇದು ನಿಜಕ್ಕೂ ಬೇಜಾರಾಗುತ್ತೆ. ಕಟೌಟ್ ಕಟ್ಟಬೇಡಿ ಅಂದ್ರೆ ಬೇಜಾರು ಮಾಡಿಕೊಳ್ತೀರಿ. ಈ ರೀತಿ ಆದಾಗ ನಮ್ಮ ಮನಸ್ಸಿಗೆ ನೋವಾಗುತ್ತದೆ” ಎಂದು ನಿನ್ನೆ ಗದಗದಲ್ಲಿ ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ದ ಬಳಿಕ ಕನ್ನಡದ ಸ್ಟಾರ್ ನಟ ಯಶ್ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X