ಬ್ರಾಹ್ಮಣ ಸಮುದಾಯದ ಅವಹೇಳನ ವಿವಾದ: ‘ಘೂಸ್ ಖೋರ್ ಪಂಡತ್’ಚಿತ್ರದ ವಿರುದ್ಧ ಯುಪಿ ಸರ್ಕಾರದಿಂದ ಎಫ್‌ಐಆರ್

Date:

ನಟ ಮನೋಜ್ ಬಾಜಪೇಯಿ ಅಭಿನಯದ ಮುಂಬರುವ ‘ಘೂಸ್ ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಕಾರಣವಾಗಿದ್ದು, ಉತ್ತರ ಪ್ರದೇಶ ಸರ್ಕಾರ ಚಿತ್ರದ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶದಿಂದ ಶೀರ್ಷಿಕೆ ಇಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -

ಚಿತ್ರದ ಟೀಸರ್ ಅನ್ನು ಫೆ. 3, 2026ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗಿತ್ತು. ಮೊದಲ ನೋಟಕ್ಕೆ ಮೆಚ್ಚುಗೆ ವ್ಯಕ್ತವಾದರೂ, ಶೀರ್ಷಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಯಿತು. ಮಂಗಳವಾರ 2026ನೇ ಸಾಲಿನ ಹೊಸ ಚಿತ್ರಗಳ ಪಟ್ಟಿಯನ್ನು ನೆಟ್‌ಫ್ಲಿಕ್ಸ್ ಪ್ರಕಟಿಸಿತ್ತು. 26ಕ್ಕೂ ಹೆಚ್ಚು ಶೀರ್ಷಿಕೆಗಳಲ್ಲಿ ‘ಘೂಸ್ ಖೋರ್ ಪಂಡತ್’ ಹೆಸರೂ ಒಳಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರವೂ ಪ್ರಾಮಾಣಿಕ ಉದ್ದೇಶದಿಂದ ಹಾಗೂ ಪ್ರೇಕ್ಷಕರನ್ನು ರಂಜಿಸುವ ದೃಷ್ಟಿಯಿಂದ ನಿರ್ಮಿಸಲಾಗಿದೆ. ಚಿತ್ರದ ಶೀರ್ಷಿಕೆ ಕೆಲವರಿಗೆ ನೋವುಂಟುಮಾಡಿರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆ ಭಾವನೆಗಳನ್ನು ಗೌರವಿಸುತ್ತೇವೆ. ಈ ಹಿನ್ನೆಲೆ ಸದ್ಯಕ್ಕೆ ಚಿತ್ರದ ಎಲ್ಲ ಪ್ರಚಾರ ಕಂಟೆಂಟ್‌ಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಭಾಗಶಃ ದೃಶ್ಯಗಳ ಆಧಾರದ ಮೇಲೆ ಚಿತ್ರವನ್ನು ನಿರ್ಣಯಿಸದೇ, ಸಂಪೂರ್ಣ ಕಥೆಯ ಪರಿಧಿಯಲ್ಲಿ ನೋಡಬೇಕು” ಎಂದು ವಿವಾದದ ನಡುವೆ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಪೊಲೀಸರ ಹೇಳಿಕೆಯ ಪ್ರಕಾರ, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಟ್ರೇಲರ್‌ ಗೆ ವ್ಯಾಪಕ ಆಕ್ಷೇಪಣೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿ ಗುರುತಿಗೆ ಅವಮಾನ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಡಿ ಒಟಿಟಿ ವೇದಿಕೆ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ಲಖನೌದಲ್ಲಿ ಎಫ್‌ಐಆರ್ ದಾಖಲಾಗಿದೆ.

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಹಜರತ್‌ಗಂಜ್ ಠಾಣೆ ಪೊಲೀಸರು ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚಿತ್ರದ ಪ್ರಚಾರ-ಪ್ರಸಾರ ನಡೆದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದಾರೆ. ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದೆಡೆ, ಚಿತ್ರದ ನಿರ್ಮಾಪಕ ನೀರಜ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮೆಯಾಚಿಸಿದ್ದಾರೆ. ಟೀಸರ್ ತೆಗೆದುಹಾಕಿದ ಬಳಿಕ ಅವರು, “ನಮ್ಮ ಚಿತ್ರವು ಕಾಲ್ಪನಿಕ ಪೊಲೀಸ್ ಕಥೆಯ ಸುತ್ತ ಹೆಣೆದಿದೆ. ‘ಪಂಡತ್’ ಎಂಬ ಪದವು ಕಾಲ್ಪನಿಕ ಪಾತ್ರದ ಹೆಸರು ಮಾತ್ರ. ಕಥೆ ವ್ಯಕ್ತಿಯ ಕ್ರಿಯೆಗಳು ಮತ್ತು ಆಯ್ಕೆಗಳ ಮೇಲೆ ಕೇಂದ್ರೀಕೃತವಾಗಿದ್ದು, ಯಾವುದೇ ಜಾತಿ, ಧರ್ಮ ಅಥವಾ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ. ಚಲನಚಿತ್ರ ನಿರ್ಮಾಪಕರಾಗಿ ಜವಾಬ್ದಾರಿಯುತ ಹಾಗೂ ಕಥನಕ್ಕೆ ಬದ್ಧನಾಗಿದ್ದೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...