ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼಪಿನಾಕʼ ಸಿನೆಮಾ; ಅದ್ದೂರಿ ಸೆಟ್‌ನಲ್ಲಿ ಚಿತ್ರೀಕರಣ

Date:

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಅವರ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಸಿನೆಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಅದ್ದೂರಿ ಸೆಟ್‌ನಲ್ಲಿ ನಡೆಯುತ್ತಿದೆ.

- Advertisement -

ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರತಂಡ ಈ ಸೆಟ್‍ ಹೇಗಿದೆ ಎಂಬುದನ್ನು ಗೌಪ್ಯವಾಗಿಟ್ಟಿದೆ. ಚಿತ್ರಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ.

ಮಾಧ್ಯಮದವರಿಗೆ ಇಡೀ ನಗರವನ್ನು ಪರಿಚಯ ಮಾಡಿಕೊಟ್ಟ ನಂತರ ನಿರ್ದೇಶಕ ಧನಂಜಯ್‍ ಚಿತ್ರತಂಡದವರ ಜೊತೆಗೆ ಮಾತಿಗೆ ಕುಳಿತಿದ್ದು, “ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್‍ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್‍ ಪಾಂಚಲ ಮತ್ತು ತಂಡದವರು ಈ ಸೆಟ್‍ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಇಂದು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಚಿತ್ರೀಕರಣ ಮಾಡಿದ ದೃಶ್ಯಾವಳಿ(ಫೂಟೇಜ್)ಗಳನ್ನು ಹೈದರಾಬಾದ್‍ಗೆ ಕಳಿಸುತ್ತಿದ್ದೇವೆ. ಅಲ್ಲಿ ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ” ಎಂದು ಮಾಹಿತಿ‌ ನೀಡಿದರು.

ʼಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, “ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರ ತೆರೆಗೆ ಬರಲಿದೆ. ಇದು ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್‍ ಜತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ. ಇದು ನನ್ನೊಬ್ಬನ ಚಿತ್ರವಲ್ಲ. ಇದೊಂದು ತಂಡದ ಚಿತ್ರ” ಎನ್ನುತ್ತಾರೆ ನಿರ್ದೇಶಕ ಧನಂಜಯ್.

ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ಮಾತನಾಡಿ, “ಗಣೇಶ್‍ ಜತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಸಹೋದರನ(ವಿಶ್ವಪ್ರಸಾದ್‍) ಆಸೆಯಾಗಿತ್ತು. ಅವರ ಜೊತೆಗೆ ಚಿತ್ರ ಮಾಡಬೇಕೆಂದು ನಿರ್ಧಾರವಾದಾಗ, ಕಥೆ ಸಹ ಇರಲಿಲ್ಲ. ಗಣೇಶ್‍ ಅವರಿಗೆ ಎಂಥಾ ಚಿತ್ರ ಮಾಡಬೇಕೆಂದು ಯೋಚಿಸಿ, ಒಂದು ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ. ತಮ್ಮ ನಿರ್ಮಾಣ ಸಂಸ್ಥೆಯು ಫ್ಯಾಕ್ಟರಿ ಮಾದರಿಯಲ್ಲಿ ಕೆಲಸ ಮಾಡುತ್ತಿದೆ. ಕಳೆದ ಏಳು ವರ್ಷಗಳಲ್ಲಿ ನಮ್ಮ ಸಂಸ್ಥೆಯಿಂದ 50 ಚಿತ್ರಗಳು ತಯಾರಾಗಿವೆ. ಈ ಪೈಕಿ 43 ಬಿಡುಗಡೆಯಾದರೆ, ಏಳು ಚಿತ್ರಗಳು ಬಿಡುಗಡೆ ಆಗುವುದಕ್ಕೆ ತಯಾರಿ ನಡೆಸಿವೆ. 20 ಚಿತ್ರಗಳು ಬೇರೆಬೇರೆ ಹಂತಗಳಲ್ಲಿವೆ” ಎಂದು ತಿಳಿಸಿದರು.

ಹಿರಿಯ ನಟ ಶ್ರೀನಿವಾಸಮೂರ್ತಿ ಮಾತನಾಡಿ. “ಕೃಷ್ಣಂ ಪ್ರಣಯ ಸಖಿ ಚಿತ್ರದ ನಂತರ ಗಣೇಶ್‍ ಜತೆಗೆ ಬಾಂಧವ್ಯ ಗಟ್ಟಿಯಾಗಿದೆ. ಹಾಗಾಗಿ ʼಈ ಚಿತ್ರವನ್ನು ನೀವೇ ಮಾಡಬೇಕುʼ ಅಂತ ಅವರು ಹೇಳಿದರು. ಈ ಚಿತ್ರವು ಬೇರೆಯದೇ ಲೆವೆಲ್‍ನಲ್ಲಿದೆ” ಎಂದರು.

ನಟ ಗಣೇಶ್ ಮಾತನಾಡಿ, “ನಿರ್ಮಾಪಕರು ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ಬಂದರು. ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದೆಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ. 800 ಜನ ಬರಬೇಕಿತ್ತು ಎಂದರು. ಕಡಿಮೆಯಾದರೆ ಹಣ ಉಳಿಯುತ್ತದೆಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್‍ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್‍ ಕಾರಣ. ನಾಲ್ಕೈದು ತಿಂಗಳು ನಿಂತು ಸೆಟ್‍ ಹಾಕಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ದಾವಣಗೆರೆ | ದಲಿತ ಸಂಘಟನೆಗಳ ಮುಖಂಡರಿಂದ ಕರ್ನಾಟಕದ ಅಂಬೇಡ್ಕರ್ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನ ಆಚರಣೆ

“ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಅವರು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಗಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅವರು, “ಬಹಳ ಖುಷಿಕೊಟ್ಟ ಪಾತ್ರವಿದು. ನನಗೆ ಖುಷಿಕೊಟ್ಟರೆ ಪ್ರೇಕ್ಷಕರಿಗೂ ಖುಷಿಯಾಗುತ್ತದೆಂದು ನಂಬಿದವನು ನಾನು. ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ. ಅದನ್ನು ನಿಜವಾಗಿಸಲು ಸಂಪೂರ್ಣವಾಗಿ ಪ್ರಯತ್ನ ಮಾಡುತ್ತೇನೆ’ ಇನ್ನೂ, ನನ್ನ ಕನ್ನಡದ ಸಂಭಾಷಣೆ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ವಿಶೇಷವಾಗಿ ʼಭೋಜರಾಜʼರಿಂದ ನನ್ನ ಕನ್ನಡದ ಮಾತಿಗೆ ಮೆಚ್ಚುಗೆ ದೊರಕಿದ್ದು ಖುಷಿಯಾಗಿದೆ” ಎಂದರು.

ಈ ಸಂದರ್ಭದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...