ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

Date:

Advertisements

ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ರಚಿಸಲಾಗಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿ ಲಭಿಸಿದೆ.

ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ಈ ಕಪ್ಪೆಯ ಕುರಿತು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ದ ಅತ್ಯುತ್ತಮ ಪ್ರಾಣಿ ವರ್ತನೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

“ಕಿರುಚಿತ್ರವನ್ನು ಜಗತ್ತಿನಲ್ಲಿರುವ 8 ಕೋಟಿ ಕನ್ನಡ ಮಾತನಾಡುವ ಜನರಿಗೆ ಹಾಗೂ ಭಾರತದ 150 ಕೋಟಿ ಜನರಿಗೆ ಅರ್ಪಣೆ ಮಾಡಿದ್ದೇನೆ” ಎಂದು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Advertisements

“ಸಂಗೀತ, ಸಾಹಿತ್ಯ ಸೇರಿದಂತೆ ಅನಾದಿ ಕಾಲದಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕನ್ನಡ ನಾಡು ಸಾವಿರಾರು ವರ್ಷಗಳಿಂದ ನಿಸರ್ಗದತ್ತವಾಗಿಯೂ ಸಂಪದ್ಭರಿತವಾಗಿದೆ. ಇಂಥ ನಾಡಿನ ಕನ್ನಡ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ ಲಭಿಸಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಿರುಚಿತ್ರಕ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ‌ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X