ನಟಿ ಜಯಪ್ರದಾ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

Date:

ಇತ್ತೀಚಿನ ಕಾನೂನು ಬೆಳವಣಿಗೆಯೊಂದರಲ್ಲಿ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರ ಶಿಕ್ಷೆಯನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.

- Advertisement -

ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಮತ್ತು ಚೆನ್ನೈನ ಜನರಲ್ ಪ್ಯಾಟರ್ಸ್ ರಸ್ತೆಯಲ್ಲಿರುವ ಜಯಪ್ರದಾ ಥಿಯೇಟರ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಈ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಂಗಭೂಮಿ ನೌಕರರ ವೇತನದಿಂದ ಕಡಿತಗೊಳಿಸಿದ ಇಎಸ್‌ಐ ದೇಣಿಗೆಯನ್ನು ಸಲ್ಲಿಸಲು ವಿಫಲರಾದ ಜಯಪ್ರದಾ ಮತ್ತು ರಂಗಭೂಮಿಯ ಇತರ ಪಾಲುದಾರರ ವಿರುದ್ಧ ಇಎಸ್‌ಐಸಿ ದೂರು ದಾಖಲಿಸಿತ್ತು. ಆಗಸ್ಟ್ 10 ರಂದು, ಎಗ್ಮೋರ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟಿ ಮತ್ತು ಅವರ ಸಂಸ್ಥೆಯ ಪಾಲುದಾರರನ್ನು ಇಎಸ್‌ಐಸಿ ಕಾಯ್ದೆಯ ಅಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜೊತೆಗೆ ಆರು ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ ವ್ಯಕ್ತಿಗೆ ಸುಪ್ರೀಂ 1 ಲಕ್ಷ ರೂ. ದಂಡ

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನಟಿಯ ಅರ್ಜಿಯನ್ನು ಅಂತಿಮವಾಗಿ ಹೈಕೋರ್ಟ್ ವಜಾಗೊಳಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ಮತ್ತು ಜಾಮೀನು ರಹಿತ ವಾರಂಟ್ ಅನ್ನು ಎತ್ತಿಹಿಡಿದಿದೆ.

ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ಅವರು 15 ದಿನಗಳೊಳಗೆ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾಗುವಂತೆ ನಟಿಗೆ ಸೂಚಿಸಿದರು. ನ್ಯಾಯಾಲಯದ ಆದೇಶಗಳನ್ನು ಪಾಲಿಸಿದರೆ ಜಯಪ್ರದಾ ಅವರಿಗೆ ಜಾಮೀನು ನೀಡುವಂತೆ ನ್ಯಾಯಾಧೀಶರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚನೆ ನೀಡಿದರು ಮತ್ತು ಅಲ್ಲದೆ ಮುಂದಿನ 15 ದಿನದ ಒಳಗೆ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನಿಗಾಗಿ 20 ಲಕ್ಷ ರೂಪಾಯಿ ಬಾಂಡ್‌ಅನ್ನು ಪಾವತಿಸುವಂತೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...