ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

Date:

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ ದಾಂಪತ್ಯ ಜೀವನ ಕೊನೆಗೊಂಡಿದೆ. ಪತ್ನಿಯಿಂದ ವಿಚ್ಛೇದನ ಕೋರಿ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.

- Advertisement -

ವಿಜಯ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್ ಶಾಂತಿಭೂಷಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಅಂತಿಮ ತೀರ್ಪು ಪ್ರಕಟಿಸಿದೆ. ವಿಚ್ಛೇದನ ಮಂಜೂರು ಮಾಡಿರುವ ನ್ಯಾಯಾಲಯವು, ಮೂರು ತಿಂಗಳ ಒಳಗಾಗಿ ಪತ್ನಿ ನಾಗರತ್ನ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ಧನ ನೀಡುವಂತೆ ನಟ ವಿಜಯ್ ಅವರಿಗೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

1999ರಲ್ಲಿ ನಾಗರತ್ನ ಅವರೊಂದಿಗೆ ವಿವಾಹವಾಗಿದ್ದ ದುನಿಯಾ ವಿಜಯ್, 2016ರಲ್ಲಿ ನಟಿ ಕೀರ್ತಿ ಅವರನ್ನು ಎರಡನೇ ಮದುವೆಯಾಗಿದ್ದರು. ಬಳಿಕ ನಾಗರತ್ನ ಅವರಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, 2024ರಲ್ಲಿ ಕೌಟುಂಬಿಕ ನ್ಯಾಯಾಲಯವು ವಿಜಯ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ವಿಜಯ್ ಅವರ ಮಾನಸಿಕ ವಿಚಾರಗಳನ್ನು ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಿದೆ.

ಹೈಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ನಟ ದುನಿಯಾ ವಿಜಯ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಭಿಮಾನಿಗಳು ಮತ್ತು ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. “ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಡಿ.ಕೆ ಸಿಂಗ್ ಮತ್ತು ಶಾಂತಿಭೂಷಣ್ ಅವರು ನೀಡಿರುವ ಆದೇಶಕ್ಕೆ ತಲೆಬಾಗಿದ್ದು, ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ,” ಎಂದು ವಿಜಯ್ ಬರೆದುಕೊಂಡಿದ್ದಾರೆ. ಪ್ರಕರಣದಲ್ಲಿ ತಮಗೆ ನೆರವಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಮತ್ತು ಯುಕ್ತ ಅನಿಲ್ ಅವರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

“ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ. ಅವರಿಗೆ ಸಮಾಜದಲ್ಲಿ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದೇನೆ,” ಎಂದಿದ್ದಾರೆ.

“ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ,” ಎಂದು ಅಭಿಮಾನಿಗಳಲ್ಲಿ ವಿಜಯ್ ವಿನಂತಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...