ʼಕೆಜಿಎಫ್‌-3ʼ ಬಗ್ಗೆ ಸುಳಿವು ನೀಡಿದ ʼಹೊಂಬಾಳೆ ಫಿಲಂಸ್‌ʼ

Date:

ಏಪ್ರಿಲ್‌ 14ಕ್ಕೆ ʼಕೆಜಿಎಫ್‌-2ʼ ತೆರೆಕಂಡು ಒಂದು ವರ್ಷ

- Advertisement -

ವರ್ಷ ಕಳೆದರೂ ಹೊಸ ಸಿನಿಮಾ ಘೋಷಿಸದ ಯಶ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನ ʼಕೆಜಿಎಫ್‌-2ʼ ಸಿನಿಮಾ ತೆರೆಕಂಡು ಇಂದಿಗೆ (ಏಪ್ರಿಲ್‌ 14) ಒಂದು ವರ್ಷ ಕಳೆದಿದೆ. ಈ ಹಿನ್ನೆಲೆ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹೊಂಬಾಳೆ ಫಿಲಂಸ್‌ ʼಕೆಜಿಎಫ್‌-3ʼ ಸಿನಿಮಾ ಮಾಡುವ ಬಗ್ಗೆ ಸುಳಿವು ನೀಡಿದೆ.

ಕೆಜಿಎಫ್‌-2 ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆದ ಸವಿ ನೆನಪಿನಲ್ಲಿ ವಿಶೇಷ ಪೋಸ್ಟರ್‌ ಮತ್ತು ವಿಡಿಯೋವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲಂಸ್‌ ತಂಡ, “ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಸಲುವಾಗಿ ರಾಕಿಭಾಯ್‌ ಮತ್ತೆ ಬರಲಿದ್ದಾನೆ” ಎಂದು ಟ್ವೀಟ್‌ ಮಾಡಿದೆ. ವಿಡಿಯೋದ ಕೊನೆಯಲ್ಲಿ ʼಕೆಜಿಎಫ್‌ ಚಾಪ್ಟರ್‌-3ʼ ಎಂದು ತೋರಿಸುವ ಮೂಲಕ ಯಶ್‌ ಅಭಿಮಾನಿಗಳು ಮತ್ತು ಸಿನಿ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.

2018ರಲ್ಲಿ ತೆರೆಕಂಡಿದ್ದ ʼಕೆಜಿಎಫ್‌-1ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಅದಾದ ನಂತರ 2022ರ ಏಪ್ರಿಲ್‌ನಲ್ಲಿ ತೆರೆಕಂಡಿದ್ದ ʼಕೆಜಿಎಫ್‌-2ʼ 1,250 ಕೋಟಿಗೂ ಅಧಿಕ ಮೊತ್ತವನ್ನು ಗಳಿಸುವ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿತ್ತು.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರಿಗೇ ವೃತ್ತಿಪರತೆ ಹೆಚ್ಚೆಂದ ಅಮೋಲ್‌ ಪಾಲೇಕರ್‌

ʼಕೆಜಿಎಫ್‌-2ʼ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದರೂ ಯಶ್‌ ತಮ್ಮ ಮುಂದಿನ ಚಿತ್ರದ ಬಗ್ಗೆ ಸುಳಿವು ನೀಡಿಲ್ಲ. ಒಂದಷ್ಟು ಕಥೆಗಳನ್ನು ಕೇಳಿದ್ದೇನೆ. ಕಥೆಯೊಂದರ ಮೇಲೆ ಕೆಲಸ ಮಾಡುತ್ತಿದ್ದೇನೆ. ಸದ್ಯದಲ್ಲೇ ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ದರು. ನಿರ್ದೇಶಕ ಪ್ರಶಾಂತ್‌ ನೀಲ್‌ ಕೂಡ ಪ್ರಭಾಸ್‌ ನಟನೆಯ ʼಸಲಾರ್‌ʼ ಮತ್ತು ಜೂನಿಯರ್‌ ಎನ್‌ಟಿಆರ್‌ ಜೊತೆಗಿನ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಯಶ್‌ ಮತ್ತು ಪ್ರಶಾಂತ್‌ ನೀಲ್‌ ಸದ್ಯ ಬೇರೆ ಸಿನಿಮಾಗಳಲ್ಲಿ ತೊಡಗಿಕೊಂಡಿರುವುದರಿಂದ ʼಕೆಜಿಎಫ್‌-3ʼ ಸಿನಿಮಾ ಸೆಟ್ಟೇರುವುದು ತಡವಾಗಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...