ನಾನು ಕನ್ನಡಿಗ: ಗಾಯಕ ಇಳಯರಾಜ

Date:

ಖ್ಯಾತ ಸಂಗೀತ ಸಂಯೋಜಕ, ಗಾಯಕ ಇಳಯರಾಜ ಅವರು ಮಂಗಳವಾರ (ಜೂನ್ 3) ತಮ್ಮ 82ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರು ‘ನಾನು ಕನ್ನಡಿಗ, ನನ್ನಮ್ಮ ಇಲ್ಲಿಯೇ ಇರೋದು, ನಾನು ಕರ್ನಾಟಕದವನು’ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಇತ್ತೀಚೆಗೆ, ಕನ್ನಡವು ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಚರ್ಚೆಗಳು ನಡೆಯುತ್ತಿವೆ. ಕಮಲ್ ಹಾಸನ್ ಕ್ಷಮೆಯಾಚಿಸಬೇಕೆಂದು ಒತ್ತಾಯಗಳು ಹೇಳಿಬರುತ್ತಿವೆ. ಆದರೆ, ಕಮಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಇಳಯರಾಜ ಅವರು ಕನ್ನಡದ ಬಗ್ಗೆ ಮಾತನಾಡಿದ್ದ ವಿಡಿಯೋ ಅವರ ಜನ್ಮದಿನದಂದು ಮುನ್ನೆಲೆಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವೈರಲ್ ಆಗಿರುವ ವಿಡಿಯೋ ಖಾಸಗಿ ವಾಹಿನಿಯೊಂದಕ್ಕೆ ಇಳಯರಾಜ ಅವರು ಸಂದರ್ಶನ ನೀಡಿದ್ದ ಸಮಯದ್ದಾಗಿದೆ. ವಿಡಿಯೋದಲ್ಲಿ, ನಿರೂಪಕರು ಇಳಯರಾಜ ಅವರನ್ನು ಅತಿಥಿ ಎಂದಾಗ ಪ್ರತಿಕ್ರಿಯಿಸುವ ಗಾಯಕ, “ನಾನು ಅತಿಥಿ ಅಲ್ಲ. ನಾನು ಕನ್ನಡದವನು. ನನ್ನ ಅಮ್ಮ ಕೊಲ್ಲೂರು ಮೂಕಾಂಬಿಕೆ ಕರ್ನಾಟಕದಲ್ಲೇ ಇರೋದು. ನನ್ನ ಊರು ಇದು. ನಾನು ಇಲ್ಲಿಯ ಮಗ” ಎಂದು ಹೇಳಿದ್ದಾರೆ.

“ಸಂಗೀತ ಕ್ಷೇತ್ರದಲ್ಲಿ ನಾನು ಸಹಾಯಕ ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಜಿ.ಕೆ ವೆಂಕಟೇಶ್ ಜೊತೆ ಕೆಲಸ ಮಾಡಿದ್ದೇನೆ. ನನ್ನ ಕನ್ನಡ ಹಾಡುಗಳನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಈ ದಿನ ಫಲಶ್ರುತಿ | ಗುಲಬರ್ಗಾ ವಿವಿ ಕರ್ಮಕಾಂಡ; ಸಿಒಡಿ ತನಿಖೆಗೆ ಸಿಂಡಿಕೇಟ್ ನಿರ್ಧಾರ

ಇತ್ತೀಚೆಗೆ, ಮೇ 24ರಂದು ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಮಲ್ ಹಾಸನ್, “ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು. ಅವರ ಹೇಳಿಕೆ ವಿರುದ್ಧ ಕರ್ನಾಟಕದಲ್ಲಿ ರಾಜಕಾರಣಿಗಳು, ಸಾಹಿತಿಗಳು ಹಾಗೂ ನಟ-ನಟಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ರಚಿತಾ ರಾಮ್ ಅವರು, “ತಪ್ಪಾದರೆ ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ?” ಎಂದು ಕಮಲ್ ಹಾಸನ್ ಅವರನ್ನು ಕೇಳಿದ್ದಾರೆ. ನಟ ಶಿವರಾಜ್‌ಕುಮಾರ್ ಅವರು, “ಕನ್ನಡಕ್ಕಾಗಿ ಹೋರಾಡುತ್ತೇವೆ, ಬೇಕಿದ್ದರೆ ಸಾಯುತ್ತೇವೆ” ಎಂದಿದ್ದಾರೆ.

ಇದಕ್ಕೂ ಹಿಂದೆ, ಭಾರತ-ಪಾಕ್ ದಾಳಿ ಸಂದರ್ಭದಲ್ಲಿ ಗಾಯಕ ಸೋನು ನಿಗಂ ಅವರು ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯದ ಮಾತನಾಡಿದ್ದರು. ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಯಾಚಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...