ಐಐಎಫ್‌ಎ 2024 | ಶಾರುಖ್ ಖಾನ್, ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ: ಸಂಪೂರ್ಣ ಪಟ್ಟಿ

Date:

ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) 2024ರ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 28ರಂದು ಅಬುಧಾಬಿಯಲ್ಲಿ ನಡೆದಿದ್ದು, ಅತ್ಯುತ್ತಮ ನಟ-ನಟಿ ಪ್ರಶಸ್ತಿಯನ್ನು ಬಾಲಿವುಡ್‌ನ ಸ್ಟಾರ್ ನಟ ಶಾರುಖ್ ಖಾನ್ ಮತ್ತು ನಟಿ ರಾಣಿ ಮುಖರ್ಜಿ ಬಾಚಿಕೊಂಡಿದ್ದಾರೆ.

- Advertisement -

ರಣಬೀರ್ ಕಪೂರ್‌ ನಟನೆಯ ಅನಿಮಲ್ ಸಿನಿಮಾಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿದ್ದು, ತಂಡದ ಪರವಾಗಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ನಿರ್ಮಾಪಕ ಭೂಷಣ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜವಾನ್‌ ಸಿನಿಮಾದಲ್ಲಿ ಅತ್ಯುತ್ತಮ ಪಾತ್ರಕ್ಕಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರೆ, ಮಿಸಸ್ ಚಟರ್ಜಿ ವರ್ಸಸ್ ನಾರ್ವೆಯಲ್ಲಿ ತಾಯಿಯ ಪಾತ್ರ ನಿರ್ವಹಿಸಿದ ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಇದನ್ನು ಓದಿದ್ದೀರಾ? 2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

ಐಪಿಎಸ್ ಅಧಿಕಾರಿ ಮನೋಜ್ ಶರ್ಮಾ ಅವರ ಸ್ಪೂರ್ತಿದಾಯಕ ಪ್ರಯಾಣವನ್ನು ಆಧರಿಸಿದ ವಿಕ್ರಾಂತ್ ಮಾಸ್ಸೆ ಅಭಿನಯದ 12ತ್‌ ಫೇಲ್‌ ಸಿನಿಮಾಕ್ಕಾಗಿ ವಿನೋದ್ ಚೋಪ್ರಾ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು.

ಐಐಎಫ್‌ಎ 2024 ಪ್ರಶಸ್ತಿ: ಸಂಪೂರ್ಣ ಪಟ್ಟಿ

ಅತ್ಯುತ್ತಮ ಚಿತ್ರ: ಅನಿಮಲ್ (ಭೂಷಣ್ ಕುಮಾರ್, ಕ್ರಿಶನ್ ಕುಮಾರ್, ಪ್ರಣಯ್ ರೆಡ್ಡಿ ವಂಗಾ)

ಅತ್ಯುತ್ತಮ ನಿರ್ದೇಶಕ: ವಿಧು ವಿನೋದ್ ಚೋಪ್ರಾ – 12ತ್ ಫೇಲ್

ಅತ್ಯುತ್ತಮ ನಟ: ಶಾರುಖ್ ಖಾನ್ – ಜವಾನ್

ಅತ್ಯುತ್ತಮ ನಟಿ: ರಾಣಿ ಮುಖರ್ಜಿ – ಮಿಸಸ್ ಚಟರ್ಜಿ ವರ್ಸಸ್ ನಾರ್ವೆ

ಅತ್ಯುತ್ತಮ ಪೋಷಕ ನಟ: ಅನಿಲ್ ಕಪೂರ್ – ಅನಿಮಲ್

ಅತ್ಯುತ್ತಮ ಪೋಷಕ ನಟಿ: ಶಬಾನಾ ಅಜ್ಮಿ – ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ

ನೆಗೆಟಿವ್ ಪಾತ್ರದಲ್ಲಿ ಅತ್ಯುತ್ತಮ ಪ್ರದರ್ಶನ: ಬಾಬಿ ಡಿಯೋಲ್ – ಅನಿಮಲ್

ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಮ್, ವಿಶಾಲ್ ಮಿಶ್ರಾ, ಮನನ್ ಭಾರದ್ವಾಜ್, ಶ್ರೇಯಸ್ ಪುರಾಣಿಕ್, ಜಾನಿ, ಭೂಪಿಂದರ್ ಬಬ್ಬಲ್, ಆಶಿಮ್ ಕೆಮ್ಸನ್, ಹರ್ಷವರ್ಧನ್ ರಾಮೇಶ್ವರ್ – ಅನಿಮಲ್

ಅತ್ಯುತ್ತಮ ಹಿನ್ನೆಲೆ ಗಾಯಕ: ಭೂಪಿಂದರ್ ಬಬ್ಬಲ್ – ಅರ್ಜನ್ ವೈಲಿ (ಅನಿಮಲ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಶಿಲ್ಪಾ ರಾವ್ – ಚಲೇಯ (ಜವಾನ್)

ಇದನ್ನು ಓದಿದ್ದೀರಾ? ಶಾರುಖ್ ಖಾನ್‌ ನಟಿಸಿದ ‘ಜವಾನ್’ ಸಿನಿಮಾ ಯಾಕೆ ರಾಜಕೀಯವಾಗಿ ಚರ್ಚೆಯಲ್ಲಿದೆ?

ವಿಶೇಷ ಪ್ರಶಸ್ತಿಗಳು:

ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆ: ಹೇಮಾ ಮಾಲಿನಿ

ವರ್ಷದ ಚೊಚ್ಚಲ ನಟನೆ: ಅಲಿಜೆ ಅಗ್ನಿಹೋತ್ರಿ

ಅತ್ಯುತ್ತಮ ಕಥೆ: ಇಶಿತಾ ಮೊಯಿತ್ರಾ, ಶಶಾಂಕ್ ಖೈತಾನ್, ಸುಮಿತ್ ರಾಯ್ – ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ

ಅತ್ಯುತ್ತಮ ಸಾಹಿತ್ಯ: ಸಿದ್ಧಾರ್ಥ್ ಸಿಂಗ್ ಮತ್ತು ಗರಿಮಾ ವಾಹಲ್ – ಸತ್ರಾಂಗ (ಅನಿಮಲ್)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...