ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

Date:

ಇತ್ತೀಚಿಗೆ ಮಲಯಾಳಂನಲ್ಲಿ ಸೂಪರ್‌ ಡೂಪರ್‌ ಹಿಟ್‌ ಆಗಿದ್ದ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕರಿಗೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ತಮ್ಮ ಅನುಮತಿಯಿಲ್ಲದೆ “ಕಣ್ಮಣಿ ಅನ್‌ಬೊದು ಕಾದಲನ್‌” ಹಾಡು ಬಳಕೆ ಮಾಡಿಕೊಂಡಿದಕ್ಕೆ ಲೀಗಲ್‌ ನೋಟಿಸ್ ನೀಡಿದ್ದಾರೆ.

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾದಲ್ಲಿ ಬಳಸಿಕೊಂಡಿರುವ “ಕಣ್ಮಣಿ ಅನ್‌ಬೊದು ಕಾದಲನ್‌” ಹಾಡು ಇಳಯರಾಜ ಸಂಗೀತ ನಿರ್ದೇಶನದ ‘ಗುಣ’ ಸಿನಿಮಾದ್ದಾಗಿದೆ.

ನೋಟಿಸ್‌ಅನ್ನು ನಿರ್ಮಾಪಕರಾದ ಸೌಬಿನ್ ಶಾಹೀರ್, ಬಾಬು ಶಾಹೀರ್ ಹಾಗೂ ಶ್ವಾನ್ ಆಂಟೊನಿ ಅವರಿಗೂ ನೀಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀವು ನಿಮ್ಮ ಸಿನಿಮಾದಲ್ಲಿ ಬಳಸಿಕೊಂಡಿರುವ ಹಾಡು/ಸಂಗೀತವನ್ನು ನಮ್ಮ ಕಕ್ಷೀದಾರರ ಸೂಕ್ತ ಅನುಮತಿ/ ಒಪ್ಪಿಗೆ/ಪರವಾನಗಿ ಇಲ್ಲದೆ ಪಡೆದುಕೊಂಡಿದ್ದೀರಿ. ಬಳಸಲಾದ ಹಾಡನ್ನು ರದ್ದುಗೊಳಿಸುವುದರ ಜೊತೆ 15 ದಿನಗಳ ಒಳಗಾಗಿ ಪರಿಹಾರವನ್ನು ನೀಡಬೇಕು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

ಈ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದಲ್ಲಿ ನಷ್ಟ ಉಂಟು ಮಾಡಿರುವ ಪರಿಣಾಮವಾಗಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಕಾಪಿರೈಟ್‌ ನಿಯಮ 1957ರ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ನಿರ್ಮಾಪಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು ಎಂದು ಕೂಡ ಹೇಳಲಾಗಿದೆ.

ಚಿದಂಬರಂ ನಿರ್ದೇಶನದ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಫೆ.22 ರಂದು ಬಿಡುಗಡೆಯಾಗಿದ್ದು, ಸಾಧಾರಣ ಬಜೆಟಿನ ಈ ಚಿತ್ರ 200 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು. ನಿರ್ಮಾಪಕರಾದ ಸೌಬಿನ್ ಶಾಹೀರ್ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೆನ್ನೈನಲ್ಲಿ ತಮಿಳು ನಟ ಅನುಮಾನಾಸ್ಪದ ಸಾವು

ತಮಿಳು ನಟ ಪ್ರದೀಪ್ ಕೆ ವಿಜಯನ್‌(39) ಅವರು ಚೆನ್ನೈನ ತಮ್ಮ ಮನೆಯಲ್ಲಿ...

ದರ್ಶನ್ ಪ್ರಕರಣ ಮುಚ್ಚಿ ಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್‌ವುಡ್...

ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್...

ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ...