ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣ | ‘ರೀಲ್ಸ್ ಸ್ಟಾರ್’ ಸೋನು ಶ್ರೀನಿವಾಸ್ ಗೌಡಗೆ 14 ದಿನ ಜೈಲು

Date:

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರಿಗೆ ನ್ಯಾಯಾಲಯವು 14 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಬಂಧಿತಳಾಗಿದ್ದ ಸೋನು ಅವರ ಪೊಲೀಸ್ ಕಸ್ಟಡಿ ಸೋಮವಾರ ಅಂತ್ಯವಾದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಯಚೂರು ಮೂಲದ ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಬಂಧನವಾಗಿದ್ದು, ಮಗುವನ್ನು ರೀಲ್ಸ್‌ನಲ್ಲಿ ಕೂಡ ಬಳಸಿಕೊಂಡಿದ್ದರು. ಅದರಲ್ಲಿ ಬಂದ ಹಣವನ್ನು ಅವರ ಪೋಷಕರಿಗೆ ಕೊಡುವ ಹೇಳಿಕೆ ನೀಡಿದ್ದರು. ಇದು ಕೂಡ ಕಾನೂನು ಬಾಹಿರ, ಜೊತೆಗೆ ದತ್ತು ಪಡೆಯುವ ಸಂಬಂಧ ಯಾವುದೇ ಕಾನೂನು ಪಾಲನೆ ಮಾಡಿರಲಿಲ್ಲ ಎಂದು ಬಾಲ ನ್ಯಾಯ ಅಧಿಕಾರಿಗಳು ಹೇಳಿದ್ದರು.

ಒಂದು ವೇಳೆ ದತ್ತು ಪಡೆದರೂ ಆ ಮಗುವಿಗೆ ಸಂಬಂಧಿಸಿದ ಯಾವುದೇ ಗುರುತಿನ ದಾಖಲೆಗಳು ಮತ್ತು ಪೋಷಕರ ಗುರುತು ಬಿಟ್ಟುಕೊಡುವುದು ಕಾನೂನು ಬಾಹಿರ ಅಪರಾಧವಾಗಿದೆ. ವಿಚಾರಣೆಗೆಂದು 4 ದಿನ ಕಸ್ಟಡಿಗೆ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಿನ್ನೆಯಷ್ಟೇ (ಭಾನುವಾರ) ರಾಯಚೂರಿಗೆ ಸೋನು ಶ್ರೀನಿವಾಸ್ ಗೌಡರನ್ನ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿ, ಸ್ಥಳೀಯರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದರು.

‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರಲ್ಲಿ ಸ್ಪರ್ಧಿ ಆಗಿ ಭಾಗಿಯಾಗಿದ್ದ ಸೋನು ಶ್ರೀನಿವಾಸಗೌಡ ಅವರನ್ನು ಬಂಧಿಸಿದ್ದ ಬ್ಯಾಡರಹಳ್ಳಿ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು, ಬಳಿಕ ಬಂಧಿಸಲಾಗಿತ್ತು.

ಯಾವೆಲ್ಲ ನಿಯಮ ಉಲ್ಲಂಘನೆ?

ನಿಯಮಗಳ ಪ್ರಕಾರ ಮಗುವನ್ನು ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಲೈವ್‌ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ. ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದೆಯೇ ಎಂಬುದನ್ನು ಕೂಡ ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್ ಗೌಡ ಮದುವೆ ಕೂಡ ಆಗಿರಲಿಲ್ಲ. ದತ್ತು ಪಡೆಯುವವರು ಹಾಗು ಮಗುವಿನ ವಯಸ್ಸಿನ ಅಂತರ 25 ವರ್ಷ ಇರಬೇಕಾಗುತ್ತದೆ.

“ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೊರಟು ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಮಗುವಿನೊಂದಿಗೆ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...

ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಜಾಮೀನು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್...

ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ...

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...