19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

Date:

ಸಿನಿಮಾದ ಸ್ಕ್ರಿಪ್ಟ್‌ ಸಿದ್ಧವಾಗಿದೆ ಎಂದ ಸ್ಟಾರ್‌ ನಟ

ಸದ್ಯದಲ್ಲೇ ತಿಳಿಯಲಿದೆ ಯಶ್‌ ಮುಂದಿನ ಚಿತ್ರದ ಮಾಹಿತಿ

ಕೆಜಿಎಫ್‌-2 ಸಿನಿಮಾ ತೆರೆಕಂಡು ಒಂದು ವರ್ಷ ಕಳೆದರೂ ಯಶ್‌ ಮಾತ್ರ ತಮ್ಮ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಈವರೆಗೆ ಸುಳಿವು ನೀಡಿರಲಿಲ್ಲ. ಯಶ್‌ ಅವರ 19ನೇ ಸಿನಿಮಾ ಯಾವುದು? ಆ ಚಿತ್ರದ ನಿರ್ದೇಶಕರು ಯಾರು ಎಂಬ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ. ಬುಧವಾರ ಕುಟುಂಬಸ್ಥರ ಜೊತೆಗೆ ನಂಜನಗೂಡಿಗೆ ಭೇಟಿ ನೀಡಿದ್ದ ನಟ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ತಮ್ಮ ಮುಂದಿನ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ನಿ ರಾಧಿಕಾ ಮತ್ತು ಮಕ್ಕಳು ಹಾಗೂ ಆಪ್ತರ ಜೊತೆಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಯಶ್‌ ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಮುಂದಿನ ಸಿನಿಮಾ ಘೋಷಣೆ ಮಾಡಲು ತಡವಾಗುತ್ತಿರುವ ಬಗ್ಗೆ ವಿವರಣೆ ನೀಡಿದ್ದಾರೆ.

“ಇಡೀ ದೇಶ ಮತ್ತು ಜಗತ್ತು ನಿರೀಕ್ಷೆಯಿಂದ ಎದುರು ನೋಡುತ್ತಿದೆ. ಅವರೆಲ್ಲರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಒಂದು ಕ್ಷಣವನ್ನೂ ವ್ಯರ್ಥ ಮಾಡದಂತೆ ಕೆಲಸ ಮಾಡುತ್ತಿದ್ದೇವೆ. ಸಿನಿಮಾ ಸ್ಕ್ರಿಪ್ಟ್‌ ಕೂಡ ಸಿದ್ಧವಾಗಿದೆ. ಸದ್ಯದಲ್ಲೇ ಎಲ್ಲ ಮಾಹಿತಿಯನ್ನೂ ನೀಡುತ್ತೇನೆ. ಎಲ್ಲರೂ ದುಡ್ಡು ಕೊಟ್ಟು ಸಿನಿಮಾ ನೋಡುತ್ತಾರೆ. ಅವರು ದುಡ್ಡು ಖರ್ಚು ಮಾಡಿ ನನ್ನ ಸಿನಿಮಾ ನೋಡಿದ್ದಕ್ಕೂ ಸಾರ್ಥಕ ಎನ್ನಿಸಬೇಕು. ಆ ರೀತಿಯ ಸಿನಿಮಾ ಮಾಡುವ ಪ್ರಯತ್ನದಲ್ಲಿದ್ದೇನೆ” ಎಂದಿದ್ದಾರೆ.

ಇದೇ ವೇಳೆ ನೀವು ಬಾಲಿವುಡ್‌ಗೆ ಹೋಗುತ್ತೀರಂತೆ ಹೌದೇ ಎಂಬ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಯಶ್‌, “ನಾನು ಎಲ್ಲಿಗೂ ಹೋಗಲ್ಲ, ಇರುವಲ್ಲಿಗೆ ಎಲ್ಲರನ್ನೂ ಕರೆಸಿಕೊಳ್ಳತ್ತೇನೆ” ಎನ್ನುವ ಮೂಲಕ ಬಾಲಿವುಡ್‌, ಹಾಲಿವುಡ್‌ನ ಕಟ್ಟುಕತೆಗಳನ್ನು ತಳ್ಳಿ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆದಿಪುರುಷ್‌ ಅವಾಂತರ | ತಿರುಗು ಬಾಣವಾದ ಪ್ರಚಾರ ತಂತ್ರ

ಯಶ್‌ ಅವರ 19ನೇ ಚಿತ್ರವನ್ನು ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್‌ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ʼಕೆವಿನ್‌ ಪ್ರೊಡಕ್ಷನ್ಸ್‌ʼ ಈ ಚಿತ್ರಕ್ಕೆ ಬಂಡವಾಳ ಹೂಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದೇ ಜೂನ್‌ 15ಕ್ಕೆ ಯಶ್‌ ಬೆಳ್ಳಿತೆರೆ ಪ್ರವೇಶಿಸಿ 15 ವರ್ಷಗಳು ಕಳೆಯಲಿವೆ. ಈ ಹಿನ್ನೆಲೆ ಅವರ 19ನೇ ಚಿತ್ರವನ್ನು ಅದೇ ದಿನದಂದು ಘೋಷಣೆ ಮಾಡುವ ಸಾಧ್ಯತೆ ಎಂಬ ಚರ್ಚೆ ಕೂಡ ಶುರುವಾಗಿದೆ. 2007ರಲ್ಲಿ ತೆರೆಕಂಡಿದ್ದ ಜಂಬದ ಹುಡುಗಿ ಚಿತ್ರದಲ್ಲಿ ಯಶ್‌ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಂಗಲಾನ್ ಟ್ರೈಲರ್ ಬಿಡುಗಡೆ: ಆಗಸ್ಟ್‌ 15ರಿಂದ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದೆ ಕೋಲಾರದ ಕಥೆ ‘ತಂಗಲಾನ್’

ತಮಿಳು ಚಿತ್ರರಂಗದ ಅತ್ಯದ್ಭುತ ನಿರ್ದೇಶಕ ಪ ರಂಜಿತ್ ನಿರ್ದೇಶನದ ನಟ ವಿಕ್ರಮ್...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ಸಮನ್ಸ್

ಸುಕೇಶ್ ಚಂದ್ರಶೇಖರ್ ಅವರ ಸುಮಾರು 200 ಕೋಟಿ ರೂಪಾಯಿ ಅಕ್ರಮ ಹಣ...

ಜೈಲೂಟ ಜೀರ್ಣವಾಗುತ್ತಿಲ್ಲ ಮನೆಯೂಟ, ಹಾಸಿಗೆ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ 17 ಮಂದಿ...

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ...