ʼಪುಷ್ಪ-2ʼ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

Date:

ʼಪುಷ್ಪ-2ʼ ಚಿತ್ರಕ್ಕೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ

- Advertisement -

ʼಮೈತ್ರಿ ಮೂವೀ ಮೇಕರ್ಸ್‌ʼ ಕಚೇರಿ ಮೇಲೆ ಎರಡನೇ ಬಾರಿಗೆ ಐಟಿ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ತೆಲುಗಿನ ಸ್ಟಾರ್‌ ನಟ ಅಲ್ಲು ಅರ್ಜುನ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಪುಷ್ಪ-2ʼ ಚಿತ್ರದ ನಿರ್ದೇಶಕ ಸುಕುಮಾರ್‌ ಮತ್ತು ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ʼಐಟಿʼ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

ಬುಧವಾರ ಬೆಳಗಿನ ಜಾವದ ಹೊತ್ತಿಗೆ ʼಐಟಿʼ ಅಧಿಕಾರಿಗಳ ಒಂದು ತಂಡ ಸುಕುಮಾರ್‌ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದೆ. ಇದೇ ಸಮಯಕ್ಕೆ ʼಪುಷ್ಟ-2ʼ ಸೇರಿದಂತೆ ಟಾಲಿವುಡ್‌ನ ಹಲವು ಸೂಪರ್‌ ಹಿಟ್‌ ಚಿತ್ರಗಳಿಗೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮಾಲೀಕರಾದ ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಅವರ ಕಚೇರಿ ಹಾಗೂ ಮನೆಗಳ ಮೇಲೂ ಅಧಿಕಾರಿಗಳ ಗುಂಪು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಿರ್ದೇಶಕ ಸುಕುಮಾರ್‌ ಇತ್ತೀಚೆಗೆ ʼಸುಕುಮಾರ್‌ ರೈಟಿಂಗ್ಸ್‌ʼ ಎಂಬ ತಮ್ಮ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದು, ʼವಿರುಪಾಕ್ಷʼ ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಸಾಯಿಧರ್ಮ ತೇಜ್‌ ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರ ಇದೇ ಏಪ್ರಿಲ್‌ 21ಕ್ಕೆ ತೆರೆ ಕಾಣಲಿದೆ. ಇದರ ಜೊತೆಗೆ ಸುಕುಮಾರ್‌ ʼಪುಷ್ಪ-2ʼ ಚಿತ್ರದ ಸಹ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಬಹುಕೋಟಿ ವ್ಯವಹಾರ ನಡೆಸುತ್ತಿರುವ ಸುಕುಮಾರ್‌ ಜಿಎಸ್‌ಟಿ ನಿಯಮಗಳನ್ನು ಉಲ್ಲಂಘಿಸಿ, ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದೇ ಕಾರಣಕ್ಕೆ ʼಐಟಿʼ ಅಧಿಕರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

ಇನ್ನು ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಒಡೆತನದ ʼಮೈತ್ರಿ ಮೂವೀ ಮೇಕರ್ಸ್‌ʼ ಮೇಲೂ ತೆರಿಗೆ ವಂಚನೆಯ ಆರೋಪಗಳಿವೆ. ಇವರಿಬ್ಬರೂ ಬಂಡವಾಳ ಹೂಡಿದ್ದ ʼವಾಲ್ಟರ್‌ ವೀರಯ್ಯʼ ಮತ್ತು ʼವೀರ ಸಿಂಹ ರೆಡ್ಡಿʼ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಯಶಸ್ಸು ಗಳಿಸಿದ್ದವು. ಈ ಸಿನಿಮಾಗಳ ವ್ಯವಹಾರದಲ್ಲಿ ತೆರಿಗೆ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ನಿರ್ಮಾಪಕರುಗಳು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲೂ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮುಖ್ಯಸ್ಥರ ಮನೆ ಹಾಗೂ ಕಚೇರಿಗಳ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...