‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಬಾಲಿವುಡ್‌ ನಟ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್

Date:

ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂಬ ಆರೋಪದ ಮೇರೆಗೆ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ‘ಜಾಟ್’ ಚಿತ್ರತಂಡದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಭಾರತೀಯ ನ್ಯಾಯ ಸಂಹಿತಾ 299ರ ಸೆಕ್ಷನ್ ಅಡಿಯಲ್ಲಿ ನಟ ಸನ್ನಿ ಡಿಯೋಲ್, ರಣದೀಪ್ ಹೂಡಾ , ವಿನೀತ್ ಕುಮಾರ್ ಸಿಂಗ್, ಡೈರೆಕ್ಟರ್ ಗೋಪಿಚಂದ್ ಮಲಿನೇನಿ, ನಿರ್ಮಾಪಕರಾದ ಟಿ.ಜಿ ವಿಶ್ವ ಪ್ರಸಾದ್, ನವೀನ್ ಯೆರ್ನೇನಿ, ವೈ ರವಿಶಂಕರ್ ವಿರುದ್ಧ ಜಲಂಧರ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಚಿತ್ರದ ಒಂದು ದೃಶ್ಯವು ಇಡೀ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯೇಸುಕ್ರಿಸ್ತನ ಬಗ್ಗೆ ಅಗೌರವ ತೋರಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

ಇನ್ನೂ ಚಿತ್ರತಂಡ ಉದ್ದೇಶಪೂರ್ವಕವಾಗಿ ಈ ಚಿತ್ರವನ್ನು ಗುಡ್ ಪ್ರೈಡೇ ಮತ್ತು ಈಸ್ಟರ್ ತಿಂಗಳಲ್ಲಿ ಬಿಡುಗಡೆ ಮಾಡಿದ್ದಾರೆ. ‘ಜಾಟ್’ ಸಿನಿಮಾವು ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶ ಹೊಂದಿದೆ. ಹಾಗಾಗಿ ನಿಷೇಧಿಸಿಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಜಾಟ್’ ಚಿತ್ರ ಏ.10ರಂದು ಬಿಡುಗಡೆಯಾಗಿತ್ತು. ಸನ್ನಿ ಡಿಯೋಲ್ ಹಾಗೂ ರಣದೀಪ್ ಹೂಡಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಜಾರ್ಟ್ ಪಾರ್ಟ್ 2 ಬರುವ ಬಗ್ಗೆಯೂ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...