ನಿರೀಕ್ಷೆ ಹೆಚ್ಚಿಸಿದ ʼರಾಘವೇಂದ್ರ ಸ್ಟೋರ್ಸ್‌ʼ ಟ್ರೈಲರ್‌

Date:

ಏಪ್ರಿಲ್‌ 28ಕ್ಕೆ ರಾಘವೇಂದ್ರ ಸ್ಟೋರ್ಸ್‌ ತೆರೆಗೆ

- Advertisement -

ಸಿದ್ಧಮಂತ್ರಕ್ಕೆ ಜೋತುಬಿದ್ದ ಹಿರಿಯ ನಟ ಜಗ್ಗೇಶ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಿರಿಯ ನಟ ಜಗ್ಗೇಶ್‌ ಅಭಿನಯದ ಬಹುನಿರೀಕ್ಷಿತ ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ಟ್ರೈಲರ್‌ ಸೋಮವಾರ ಬಿಡುಗಡೆಯಾಗಿದೆ. ಬ್ರಹ್ಮಚಾರಿಯ ಬದುಕಿನ ಸುತ್ತ ಹಾಸ್ಯಮಯವಾಗಿ ಮೂಡಿಬಂದಿರುವ ಚಿತ್ರದ ಟ್ರೈಲರ್‌ ಯುಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ.

ಚಿತ್ರದಲ್ಲಿ ಜಗ್ಗೇಶ್‌ ಬಾಣಸಿಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಮಾಡುವವನು ಎಂಬ ಕಾರಣಕ್ಕೆ ಹೆಣ್ಣು ಸಿಗದೆ ಬ್ರಹ್ಮಚಾರಿಯಾಗಿ ಉಳಿದ ವ್ಯಕ್ತಿಯ ಬದುಕಿನ ಸುತ್ತ ಹಾಸ್ಯಮಯವಾಗಿ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಶ್ವೇತಾ ಶ್ರೀವಾತ್ಸವ್‌ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿರಿಯ ನಟ ದತ್ತಣ್ಣ, ಅಚ್ಯುತ್‌ ಕುಮಾರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ʼನೀರ್‌ದೋಸೆʼ, ʼತೋತಾಪುರಿʼ ಸೇರಿದಂತೆ ಇತ್ತೀಚಿನ ಚಿತ್ರಗಳಲ್ಲಿ ತಾವು ನಿಭಾಯಿಸಿರುವ ರೀತಿಯ ಪಾತ್ರಗಳಿಗೆ ಜಗ್ಗೇಶ್‌ ಮತ್ತೆ ಮತ್ತೆ ಜೋತು ಬೀಳುತ್ತಿರುವುದು ಬೇಸರದ ಸಂಗತಿ.

ʼರಾಜಕುಮಾರʼ, ʼಯುವರತ್ನʼ ಮುಂತಾದ ಸೂಪರ್‌ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳಿದ್ದ ಖ್ಯಾತ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌ ಈ ಹಾಸ್ಯ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡದ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಅಜನೀಶ್‌ ಲೋಕನಾಥ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಟೈಟಲ್‌ ಮತ್ತು ಪಾತ್ರವರ್ಗದ ಕಾರಣಕ್ಕೆ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರ 2022 ಆಗಸ್ಟ್‌ 5 ರಂದು ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಲಿರಿಕಲ್‌ ಹಾಡು ಮತ್ತು ಟ್ರೈಲರ್‌ ಮೂಲಕ ಸದ್ಯ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಏಪ್ರಿಲ್‌ 28ಕ್ಕೆ ತೆರೆಗೆ ಬರಲಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...