ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

Date:

ಕಿರುತೆರೆಯಲ್ಲಿ ಮಿಂಚಿ, ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಜಯರಾಮ್ ಕಾರ್ತಿಕ್ (ಜೆಕೆ) ಸಿನಿರಂಗ ತೊರೆಯಲು ನಿರ್ಧರಿಸಿದ್ದಾರೆ.

ತಮಗೆ ಗೌರವ ಇಲ್ಲದ ಕಡೆ ಇರುವುದಿಲ್ಲ. ಚೆನ್ನಾಗಿದ್ದಾಗಲೇ ಚಿತ್ರರಂಗವನ್ನು ಬಿಟ್ಟು ಹೊರಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

“ಹಿಂದಿ ಸಿನಿಮಾ ರಂಗದಲ್ಲಿ ಅವಕಾಶ ಸಿಕ್ಕಿತ್ತು. ಒಂದು ಸಿನಿಮಾಗೆ ನನ್ನನ್ನು ಆಯ್ಕೆ ಮಾಡಿದ್ದರು. ಆದರೆ, ಕೆಲವರು ಇಲ್ಲಿಂದಲೇ ಕರೆ ಮಾಡಿ, ನನ್ನನ್ನು ಸಿನಿಮಾ ತಂಡದಿಂದ ಕೈಬಿಡುವಂತೆ ಒತ್ತಡ ಹಾಕಿದರು. ಹಿಂದಿ ಸಿನಿಮಾದಲ್ಲಿದ್ದ ಅವಕಾಶವನ್ನು ತಪ್ಪಿಸಿದರು” ಎಂದು ಜೆಕೆ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದೆಲ್ಲವನ್ನು ಯಾರು ಮಾಡುತ್ತಿದ್ದಾರೆ? ಎಂಬುದನ್ನು ಸಾಬೀತು ಮಾಡಲು ಕೈಯಲ್ಲಿ ಮೊಬೈಲ್‌ ಹಿಡಿದು, ಎಲ್ಲವನ್ನು ರೆಕಾರ್ಡ್‌ ಮಾಡಬೇಕಾಗುತ್ತದೆ. ಅಂತಹ ಕೆಲಸವನ್ನು ನಾವು ಮಾಡುವುದಿಲ್ಲ. ಯಾರ್ಯಾರು ಏನೇನ್ ಮಾಡ್ತಿದ್ದಾರೆ ಅಂತ ಅವರಿಗೇ ಗೊತ್ತು” ಎಂದು ಹೇಳಿದ್ದಾರೆ.

“2022ರೊಳಗೆ ಚಿತ್ರರಂಗದಿಂದ ನಮ್ಮ ಮುಗಿಸುತ್ತೇವೆಂದು ಚಾಲೆಂಜ್‌ ಮಾಡಿದ್ದರು. ಅವರು ಯಾಕೆ ಹಾಗೆ ಮಾಡಿದರೋ ಗೊತ್ತಿಲ್ಲ. ನಾನಂತು ಯಾರಿಗೂ ಏನನ್ನೂ ಮಾಡಿಲ್ಲ. ಜನರ ಪ್ರೀತಿ ಸಕ್ಕಿದೆ. ಚೆನ್ನಾಗಿದ್ದಾಗಲೇ ಇಂಡಸ್ಟ್ರಿ ತೊರೆಯುತ್ತೇನೆ” ಎಂದಿದ್ದಾರೆ.

“ಸದ್ಯ ನನ್ನ ಕೈಯಲ್ಲಿ ಎರಡು ಸಿನಿಮಾಗಳಿವೆ. ಐರಾ ಮತ್ತು ಕಾರಾ. ಆ ಎರಡು ಸಿನಿಮಾಗಳನ್ನು ರಿಲೀಸ್‌ ಮಾಡಿದ ಬಳಿಕ, ಚಿತ್ರರಂಗಕ್ಕೆ ಗುಡ್‌ ಬೈ ಹೇಳುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾಲಕ್ಷ್ಮೀ ಯೋಜನೆ | ಕಾಂಗ್ರೆಸ್‌ ಗೆಲುವಿನ ಭರವಸೆ; ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಮುಂದೆ ನಿಂತ ಮಹಿಳೆಯರು

2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ' ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ...

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...