‘ಕಾಳಾ ಹಿರಣ್’ ಸಿನಿಮಾ ಬಿಡುಗಡೆ ವಿವಾದ: ನಟ ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ನೋಟಿಸ್

Date:

‘ಕಾಳಾ ಹಿರಣ್: ದಿ ಬ್ಯಾಟಲ್ ಫಾರ್ ಲೀಗಲ್’ (Kala Hiran: The Battle for Legal) ಸಿನಿಮಾದ ಬಿಡುಗಡೆಗೆ ತಡೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ತಡೆ ನೀಡುವಂತೆ ಕೋರಿ ಚಿತ್ರತಂಡ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸಲ್ಮಾನ್ ಖಾನ್‌ಗೆ ನೋಟಿಸ್ ಜಾರಿ ಮಾಡಿದೆ.

- Advertisement -

​ವ್ಯಕ್ತಿತ್ವ ಹಕ್ಕುಗಳ (Personality rights) ಉಲ್ಲಂಘನೆಯ ಆರೋಪದಡಿ ಸಲ್ಮಾನ್ ಖಾನ್ ಈ ಹಿಂದೆಯೇ ಪ್ರಕರಣವೊಂದನ್ನು ದಾಖಲಿಸಿದ್ದಾರೆ. ಪ್ರಸ್ತುತ ಈ ಸಿನಿಮಾ ಕುರಿತ ವಿವಾದವೂ ಅದೇ ಪ್ರಕರಣದ ವ್ಯಾಪ್ತಿಗೆ ಬರುವುದರಿಂದ, ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುವುದರಿಂದ ಒಂದೇ ವಿಷಯದ ಬಗ್ಗೆ ಎರಡು ಸಮಾನಾಂತರ ಕಾನೂನು ಹೋರಾಟಗಳು ನಡೆದಂತಾಗುತ್ತದೆ ಎಂದು ಚಿತ್ರದ ನಿರ್ಮಾಪಕ ಅಮಿತ್ ಜಾನಿ ವಾದಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಅನೂಪ್ ಜೈರಾಮ್ ಭಂಭಾನಿ ಅವರು ಮಂಗಳವಾರ ಸಲ್ಮಾನ್ ಖಾನ್‌ಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಲ್ಮಾನ್ ಖಾನ್ ಅವರು ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಕೋರಿ ಈ ಹಿಂದೆಯೇ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. 2025ರ ಡಿಸೆಂಬರ್ 11ರಂದು ನ್ಯಾಯಾಲಯವು ಅವರಿಗೆ ಮಧ್ಯಂತರ ತಡೆಯಾಜ್ಞೆಯನ್ನೂ ನೀಡಿತ್ತು. ಬಳಿಕ, ತಮ್ಮ ಜೀವನಾಧಾರಿತ ಕಥೆ ಹೊಂದಿದೆ ಎನ್ನಲಾದ ಈ ನಿರ್ದಿಷ್ಟ ಸಿನಿಮಾದ (ಕಾಳಾ ಹಿರಣ್) ಬಿಡುಗಡೆಯನ್ನು ವಿರೋಧಿಸಿ ಅವರು ಮತ್ತೊಂದು ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ವಿಚಾರಣೆ ಹಂತದಲ್ಲಿದೆ. ಈ ಸಿನಿಮಾದ ಬಿಡುಗಡೆ, ಪ್ರದರ್ಶನ ಹಾಗೂ ಟೀಸರ್‌ಗಳ ಪ್ರಸಾರಕ್ಕೆ ನಿರ್ಬಂಧ ಹೇರುವಂತೆ ಕೋರಿರುವ ಸಲ್ಮಾನ್ ಅವರ ಪ್ರಸ್ತುತ ಅರ್ಜಿಯು, ಈ ಹಿಂದಿನ ಪ್ರಕರಣದ ವಿಷಯಗಳನ್ನೇ ಹೋಲುತ್ತದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ತಡೆ ನೀಡಬೇಕು ಎಂದು ನಿರ್ಮಾಪಕರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಜುಲೈ 27ರಂದು ದೆಹಲಿ ಹೈಕೋರ್ಟ್‌ನ ಸಮನ್ವಯ ಪೀಠವು, ಚಿತ್ರದ ಟೀಸರ್ ಮತ್ತು ಇತರ ಪೋಸ್ಟ್‌ಗಳನ್ನು ಆನ್‌ಲೈನ್ ವೇದಿಕೆಗಳಿಂದ ತೆಗೆದುಹಾಕುವಂತೆ ಸೂಚಿಸಿ ಮಧ್ಯಂತರ ಆದೇಶ ನೀಡಿತ್ತು. 59 ವರ್ಷದ ನಟನ ಅನುಮತಿಯಿಲ್ಲದೆ ಅವರ ಹೆಸರು, ಹಾವಭಾವ ಮತ್ತು ಇತರ ವಿಶಿಷ್ಟ ಲಕ್ಷಣಗಳನ್ನು ವಾಣಿಜ್ಯ ಲಾಭಕ್ಕಾಗಿ ಬಳಸುವಂತಿಲ್ಲ ಹಾಗೂ ಅವರ ಘನತೆಗೆ ಧಕ್ಕೆ ತರುವಂತಹ ಅಂಶಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ನಿರ್ದೇಶಿಸಿತ್ತು. ಡಿಜಿಟಲ್ ಮಾಧ್ಯಮಗಳ ವೇಗ ಮತ್ತು ವ್ಯಾಪ್ತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬರ ಘನತೆಗೆ ಕುಂದುಂಟಾದರೆ ಅದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

‘ಕಾಳಾ ಹಿರಣ್’ ಸಿನಿಮಾವು ಸಲ್ಮಾನ್ ಖಾನ್ ಅವರ ಜೀವನಾಧಾರಿತ ಚಿತ್ರವಲ್ಲ (ಬಯೋಪಿಕ್) ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಘಟನೆಗಳನ್ನು ‘ವ್ಯಕ್ತಿತ್ವ ಹಕ್ಕುಗಳ ರಕ್ಷಣೆ’ಯ ನೆಪದಲ್ಲಿ ಅಳಿಸಿಹಾಕಲು ಸಲ್ಮಾನ್ ಖಾನ್‌ಗೆ ಸಾಧ್ಯವಿಲ್ಲ ಎಂದು ಚಿತ್ರದ ನಿರ್ಮಾಪಕರು ವಾದಿಸಿದ್ದಾರೆ. ಅಲ್ಲದೆ, ಚಿತ್ರಕ್ಕೆ ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಇನ್ನೂ ದೊರೆತಿಲ್ಲ ಮತ್ತು ಚಿತ್ರದ ಟ್ರೇಲರ್ ಕೂಡ ಬಿಡುಗಡೆಯಾಗಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮ್ಮ ಖ್ಯಾತಿ ಮತ್ತು ವರ್ಚಸ್ಸಿಗೆ ಧಕ್ಕೆ ತರುವ ಮೂಲಕ, ಕೃಷ್ಣಮೃಗ ಬೇಟೆ ಪ್ರಕರಣವನ್ನು ವೈಭವೀಕರಿಸಿ ಅಗ್ಗದ ಪ್ರಚಾರ ಗಿಟ್ಟಿಸಿಕೊಳ್ಳಲು ಹಾಗೂ ಸುದ್ದಿಯಾಗಲು ನಿರ್ಮಾಪಕರು ಉದ್ದೇಶಪೂರ್ವಕವಾಗಿ ಯತ್ನಿಸುತ್ತಿದ್ದಾರೆ ಎಂದು ಸಲ್ಮಾನ್ ಖಾನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ತಮ್ಮ ಚಿತ್ರಗಳು, ಹಾವಭಾವ ಹಾಗೂ ಹೆಸರನ್ನು ಅನುಮತಿಯಿಲ್ಲದೆ ಬಳಸಿಕೊಳ್ಳುತ್ತಿರುವ ಸಾಮಾಜಿಕ ಜಾಲತಾಣಗಳು ಹಾಗೂ ಇ-ಕಾಮರ್ಸ್ ವೆಬ್‌ಸೈಟ್‌ಗಳ ವಿರುದ್ಧವೂ ಅವರು ಈ ಹಿಂದೆ ಕೋರ್ಟ್ ಮೊರೆ ಹೋಗಿದ್ದರು.

​ಇದೀಗ ಚಿತ್ರತಂಡ ಸಲ್ಲಿಸಿರುವ ಅರ್ಜಿಯ ಬಗ್ಗೆ ದೆಹಲಿ ಹೈಕೋರ್ಟ್ ಸಲ್ಮಾನ್ ಖಾನ್‌ಗೆ ನೋಟಿಸ್ ನೀಡಿದ್ದು, ಅವರು ಇದಕ್ಕೆ ಪ್ರತಿಕ್ರಿಯಿಸಬೇಕಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ಮುಂದಿನ ನಿರ್ಧಾರ ಕೈಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ...