ಪ್ರಭಾಸ್‌ ಜೊತೆ ತೆರೆ ಹಂಚಿಕೊಳ್ಳಲು ಸಜ್ಜಾದ ಕಮಲ್‌ ಹಾಸನ್‌

Date:

  • ಮೂರು ದಶಕಗಳ ಬಳಿಕ ಬಚ್ಚನ್‌ ಜೊತೆಯಾದ ಕಮಲ್‌ ಹಾಸನ್‌
  • ಕಮಲ್‌ ಹಾಸನ್‌ಗೆ ಆತ್ಮೀಯವಾಗಿ ಸ್ವಾಗತ ಕೋರಿದ ಅಮಿತಾಭ್

ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼವಿಕ್ರಮ್‌ʼ ಸಿನಿಮಾದ ಯಶಸ್ಸಿನ ಬಳಿಕ ʼಇಂಡಿಯನ್‌ 2ʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಅವರು ಇದೀಗ ಪ್ರಭಾಸ್‌ ಮುಖ್ಯಭೂಮಿಕೆಯ ಇನ್ನೂ ಹೆಸರಿಡದ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಘೋಷಿಸಿದ್ದಾರೆ.

- Advertisement -

ಈ ಮಲ್ಟಿಸ್ಟಾರರ್‌ ಸಿನಿಮಾದಲ್ಲಿ ಕಮಲ್‌ ಹಾಸನ್‌ ಖಳನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶೇಷ ಪಾತ್ರದಲ್ಲಿ ನಟಿಸುವ ಸಲುವಾಗಿ ಅಂದಾಜು 100 ಕೋಟಿ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪ್ರಭಾಸ್‌ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿರುವ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖ್ಯಾತ ನಟಿಯರಾದ ದೀಪಿಕಾ ಪಡುಕೊಣೆ ಮತ್ತು ದಿಶಾ ಪಠಾಣಿ ಕೂಡ ಚಿತ್ರತಂಡದ ಭಾಗವಾಗಿದ್ದಾರೆ.

1984ರಲ್ಲಿ ತೆರೆಕಂಡಿದ್ದ ʼಖಬರ್ದಾರ್‌ʼ ಮತ್ತು ʼಗಿರಫ್ತಾರ್‌ʼ ಚಿತ್ರಗಳಲ್ಲಿ ಅಮಿತಾಭ್ ಬಚ್ಚನ್‌ ಮತ್ತು ಕಮಲ್‌ ಹಾಸನ್‌ ಜೊತೆಯಾಗಿ ನಟಿಸಿದ್ದರು. ಮೂರು ದಶಕಗಳ ಬಳಿಕ ಈ ಲೆಜೆಂಡ್‌ಗಳು ಮತ್ತೆ ಒಂದಾಗುತ್ತಿದ್ದು, ಅಮಿತಾಭ್ ಬಚ್ಚನ್‌ ಅವರು ಟ್ವೀಟ್‌ ಮಾಡುವ ಮೂಲಕ ಕಮಲ್‌ ಹಾಸನ್‌ ಅವರನ್ನು ʼಪ್ರಾಜೆಕ್ಟ್‌ ಕೆʼ ಸ್ವಾಗತಿಸಿದ್ದಾರೆ.

ʼಮಹಾನಟಿʼ ಖ್ಯಾತಿಯ ನಿರ್ದೇಶಕ ನಾಗ್‌ ಅಶ್ವಿನ್‌ ಈ ಬಹುನಿರೀಕ್ಷಿತ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ತಾರಾಗಣದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರಕ್ಕೆ ಹಿರಿಯ ನಿರ್ಮಾಪಕ ಅಶ್ವಿನಿ ದತ್‌ ಬಂಡವಾಳ ಹೂಡಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...