ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಸಿನಿ ತಾರೆಯರು

Date:

Advertisements
  • ನೂತನ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಕಮಲ್‌ ಹಾಸನ್‌
  • ಕಾಂಗ್ರೆಸ್‌ ಸರ್ಕಾರ ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡಲಿದೆ ಎಂದ ಶಿವಣ್ಣ

ಶನಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪದಗ್ರಹಣ ಕಾರ್ಯಕ್ರಮಕ್ಕೆ ತಮಿಳಿನ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌, ಕನ್ನಡದ ಖ್ಯಾತ ನಟ ಶಿವರಾಜ್‌ ಕುಮಾರ್‌ ಸೇರಿದಂತೆ ಹಲವು ತಾರೆಯರು ಸಾಕ್ಷಿಯಾಗಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಜೊತೆಗೆ ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದ ಕಮಲ್‌ ಹಾಸನ್‌, ಸಿದ್ದರಾಮಯ್ಯನವರ ಪದಗ್ರಹಣ ಕಾರ್ಯಕ್ರಮದಲ್ಲೂ ಭಾಗಿಯಾಗಿ ನೂತನ ಸಂಪುಟದ ಸದಸ್ಯರನ್ನು ಅಭಿನಂದಿಸಿದ್ದಾರೆ.

ಕಾಂಗ್ರೆಸ್‌ ನಾಯಕರ ಪರ ಚುನಾವಣಾ ಪ್ರಚಾರ ಮಾಡಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ಶಿವರಾಜ್‌ ಕುಮಾರ್‌ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಂಠೀರವ ಸ್ಟೇಡಿಯಂ ಪ್ರವೇಶಿಸುತ್ತಲೇ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, “ಜನರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ನಡೆಯಬೇಕು ಎಂಬುದು ನನ್ನ ಆಸೆ. ಆ ರೀತಿಯಲ್ಲಿ ಸಿದ್ದರಾಮಯ್ಯನವರ ಸರ್ಕಾರ ಸೇವೆ ಸಲ್ಲಿಸಲಿದೆ ಎಂದು” ಭರವಸೆ ವ್ಯಕ್ತಪಡಿಸಿದ್ದಾರೆ.

Advertisements
shivaraj kumar 6

ನಟಿ, ಮಾಜಿ ಸಂಸದೆ ರಮ್ಯಾ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಏರುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ ಜನರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ ಎಂದು ನನಗೆ ಗೊತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದರು. 5 ಗ್ಯಾರಂಟಿಗಳನ್ನು ಕೂಡ ಕಾಂಗ್ರೆಸ್‌ ಸರ್ಕಾರ ಪೂರ್ಣಗೊಳಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ, ನಟ ದುನಿಯಾ ವಿಜಯ್‌, ಯುವನಟಿ ನಿಶ್ವಿಕಾ ನಾಯ್ಡು, ಝೈದ್‌ ಖಾನ್‌, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X