ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ ಸಿಲುಕಿದ್ದರು ಎಂದು ಹೇಳಲಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನು ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್ ಚಟಕ್ಕೆ ಸಿಲುಕಿ ಸಾಲಬಾಧೆ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಸುಮಾರು ಹತ್ತು ದಿನಗಳ ಹಿಂದೆಯೇ ಗುರುಪ್ರಸಾದ್ ಸಾವನ್ನಪ್ಪಿದ್ದು, ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕನ್ನಡದಲ್ಲಿ ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ ಮತ್ತು ರಂಗನಾಯಕ ಸಿನಿಮಾವನ್ನು ನಿರ್ದೆಶಿಸಿದ್ದಾರೆ. ಹಾಗೆಯೇ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೆಯೇ ಬಿಗ್‌ಬಾಸ್ ಸ್ಪರ್ಧಿಯಾಗಿದ್ದರು. ಕೆಲವು ರಿಯಾಲಿಟಿ ಶೋಗಳ ತೀರ್ಪುಗಾರರಾಗಿದ್ದರು.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
