ಕನ್ನಡ ಚಿತ್ರ ನಿರ್ದೇಶಕ ಎಸ್ ಎಸ್‌ ಡೇವಿಡ್ ನಿಧನ; ಮೃತದೇಹ ಪಡೆಯಲು ಬಾರದ ಕುಟುಂಬ

Date:

Advertisements

ಪೊಲೀಸ್‌ ಸ್ಟೋರಿ, ಜೈಹಿಂದ್‌ ಸೇರಿದಂತೆ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ (55) (SS David) ಇಂದು ನಿಧನರಾದರು.

ಹೃದಯಾಘಾತದಿಂದ ಭಾನುವಾರ(ಆ.31) ಸಂಜೆ 7.30ರ ಸುಮಾರಿಗೆ ಆರ್ ಆರ್ ನಗರದ ಎಸ್.ಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

90ರ ದಶಕದಲ್ಲಿ ಖಳನಾಯಕನಾಗಿದ್ದ ಎಸ್‌ ಎಸ್‌ ಡೇವಿಡ್‌ ಜೈಹಿಂದ್, ಧೈರ್ಯ ಮುಂತಾದ ಸಿನಿಮಾಗಳನ್ನ ನಿರ್ದೇಶಿಸಿದ್ದರು.

ಎಸ್​ಎಸ್ ಡೇವಿಡ್ ಅವರು ಚಿತ್ರಕಥೆ ಬರಹಗಾರನಾಗಿ ಮಾತ್ರವಲ್ಲದೆ ನಿರ್ದೇಶನದಲ್ಲೂ ಛಾಪು ಮೂಡಿಸಿದ್ದರು. ‘ಹಾಯ್ ಬೆಂಗಳೂರು’ ಹಾಗೂ ‘ಧೈರ್ಯ’ ಚಿತ್ರವನ್ನ ನಿರ್ದೇಶನ ಮಾಡಿ ಡೇವಿಡ್ ಗಮನ ಸೆಳೆದಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ಆದರೆ, ಕುಟುಂಬದವರು ಅವರ ಮೃತದೇಹ ಪಡೆಯಲು ಸಿದ್ಧರಿಲ್ಲ.

ಇದನ್ನು ಓದಿದ್ದೀರಾ? ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಡೇವಿಡ್ ಅವರು ಆಗಸ್ಟ್ 31ರಂದು ಔಷಧ ಅಂಗಡಿಗೆ ತೆರಳಿದ್ದರು. ಈ ವೇಳೆ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಆರ್​ಆರ್ ನಗರದ ಎಸ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಕ್ಟೋರಿಯಾ ಆಸ್ಪತ್ರೆಗೆ ಡೇವಿಡ್ ಪಾರ್ಥಿವ ಶರೀರ ರವಾನೆ ಆಗಿದೆ. ಸದ್ಯ ಕುಟುಂಬದವರು ಬಾರದೆ ಮೃತದೇಹ ಕೊಡುವುದಿಲ್ಲ ಎಂದು ಆರ್ ​ಆರ್​ ನಗರ ಪೊಲೀಸರು ಹೇಳಿದ್ದಾರೆ. ಡೇವಿಡ್ ಅವರ ಅಕ್ಕ ಉಡುಪಿಯ ಕಾಪುವಿನಲ್ಲಿದ್ದಾರೆ. ಅವರು ತಮಗೆ ಬರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು, ಇಲ್ಲಿಯೇ ಅಂತಿಮ ಸಂಸ್ಕಾರ ನಡೆಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ...

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್...

Download Eedina App Android / iOS

X