ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಇತ್ತೀಚಿಗೆ ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ಒಂದು ಭಾವಚಿತ್ರವನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ಗೊತ್ತಾಗಿಲ್ಲ.
‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ಶೋಭಿತಾ ನಟಿಸಿದ್ದರು. ಜನಪ್ರಿಯ ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿ ಕೆಲಸ ಮಾಡಿದ್ದರು.
