ಕರ್ನಾಟಕದಲ್ಲಿ ವಿವಾದಿತ ʻಹಮಾರೆ ಬಾರಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

Date:

Advertisements

ರಾಜ್ಯದ ಶಾಂತಿಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ವಿವಾದಿತ ʼಹಮಾರೆ ಬಾರಹ್‌’ ಸಿನಿಮಾ ಪ್ರದರ್ಶನವನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿ ಗುರುವಾರ ಆದೇಶ ಹೊರಡಿಸಿದೆ. ಹಿರಿಯ ನಟ ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ಇಂದು (ಜೂನ್ 7, ಶುಕ್ರವಾರ) ಬಿಡುಗಡೆಯಾಗಲಿದೆ.

ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳ ಮುಸ್ಲಿಂ ಗುಂಪುಗಳು ಸಿನಿಮಾ ಪ್ರದರ್ಶನ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಸಿನಿಮಾದ ನಿರ್ಮಾಪಕರು ಮುಸ್ಲಿಂ ಸಮುದಾಯದವನ್ನು ಅವಮಾನಿಸಿದ್ದಾರೆ. ಕುರಾನ್‌ನ ಸೂರಾ ಅಲ್-ಬಕರಾದಲ್ಲಿನ ಶ್ಲೋಕಗಳನ್ನು ತಪ್ಪಾಗಿ ವಿವರಿಸಿದ್ದಾರೆ. ಚಿತ್ರ ಬಿಡುಗಡೆಯಾದರೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಬಹುದು ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಗುರುವಾರ ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು, ವಿದ್ಯುನ್ಮಾನ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳು, ಸಿನಿಮಾ ಥಿಯೇಟರ್‌ಗಳು, ಖಾಸಗಿ ಟೆಲಿವಿಷನ್ ಚಾನೆಲ್‌ಗಳು ಮತ್ತು ಇತರ ಮಾಧ್ಯಮಗಳಲ್ಲಿ ʼಹಮಾರೆ ಬಾರಹ್’ ಸಿನಿಮಾ ಮತ್ತು ಅದರ ಟ್ರೇಲರ್ ಬಿಡುಗಡೆಯನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಸಿನಿಮಾಗಳ ನಿಯಂತ್ರಣ ಕಾಯಿದೆ, 1964 ರ ಸೆಕ್ಷನ್ 15(1) ಮತ್ತು 15(5) ಅಡಿಯಲ್ಲಿ ನಿಷೇಧ ಹೇರಲಾಗಿದೆ.

ಕಾಯ್ದೆಯ ಸೆಕ್ಷನ್ 15(2) ರ ಪ್ರಕಾರ ನಿಷೇಧ ಹೇರುವ ಮುನ್ನ ಚಿತ್ರ ನಿರ್ಮಾಪಕರಿಗೆ ಸರ್ಕಾರ ನೋಟಿಸ್ ಜಾರಿ ಮಾಡಬೇಕಾಗಿದ್ದರೂ, ಈ ಅಗತ್ಯವನ್ನು ಪೂರೈಸಲು ಸಾಕಷ್ಟು ಸಮಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಕೆಂದರೆ ಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್ ಗುಪ್ತಾ, ಶಿಯೋ ಬಾಲಕ್ ಸಿಂಗ್, ಸಂಜಯ್ ನಾಗ್ಪಾಲ್ ಮತ್ತು ಇತರರು ಕರ್ನಾಟಕದ ಹೊರಗೆ ನೆಲೆಸಿದ್ದಾರೆ.

ಬಾಂಬೆ ಹೈಕೋರ್ಟ್ ಕೂಡ ಜೂನ್ 14 ರವರೆಗೆ ಚಿತ್ರದ ಬಿಡುಗಡೆಯನ್ನು ತಡೆಹಿಡಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X