ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

Date:

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್‌ ಎಂ ಸುರೇಶ್ ವಿರುದ್ಧ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಈ ಬಗ್ಗೆ ‘ಲೈವ್ ಲಾ’ ವರದಿ ಮಾಡಿದ್ದು, ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿರುವುದಾಗಿ ತಿಳಿಸಿದೆ.

ಸುದೀಪ್ ವಿರುದ್ಧ ಮಾನಹಾನಿಕರ ಮತ್ತು ಸಮಾಜದಲ್ಲಿ ಅವರ ಹೆಸರು ಮತ್ತು ಖ್ಯಾತಿಗೆ ಧಕ್ಕೆ ಉಂಟುಮಾಡುವ ನಿರ್ದಿಷ್ಟ ಆರೋಪಗಳನ್ನು ಮಾಡಿರುವುದರಿಂದ, ಆರೋಪಿಗಳ ವಿರುದ್ಧ ಪ್ರಾಥಮಿಕ ಪ್ರಕರಣವನ್ನು ದಾಖಲಿಸಲಾಗಿದೆ. ಆದ್ದರಿಂದ,  ಸಮನ್ಸ್‌ ಜಾರಿ ಮಾಡುವ ಕ್ರಮದಲ್ಲಿ ಯಾವುದೇ ಅಕ್ರಮ ಅಥವಾ ಅಕ್ರಮ ಕಂಡುಬಂದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಪ್ರಕರಣ?

ತಮ್ಮ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ, ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ ಅವರು ಎಂ.ಎನ್. ಕುಮಾರ್ ಮತ್ತು ಎಂ.ಎನ್.ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

“ನನ್ನ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ ಸುದೀಪ್‌ ಕಳೆದ 7-8 ವರ್ಷಗಳ ಹಿಂದೆ ನನ್ನಿಂದ ಮುಂಗಡ ಹಣ ಪಡೆದಿದ್ದರು. ಆದರೆ, ಇದುವರೆಗೂ ಕಾಲ್‌ಶೀಟ್‌ ನೀಡಿಲ್ಲ. ನನ್ನ ಹಣವನ್ನೂ ವಾಪಸ್‌ ಕೊಡುತ್ತಿಲ್ಲ” ಎಂದು ನಿರ್ಮಾಪಕ ಎಂ.ಎನ್.ಕುಮಾರ್‌ ಆರೋಪಿಸಿದ್ದರು.

ಸಮಸ್ಯೆ ಬಗೆಹರಿಸುವಂತೆ ಕೋರಿ ಫಿಲ್ಮ್‌ ಛೇಂಬರ್‌ ಮೆಟ್ಟಿಲೇರಿದ್ದರು. ಮಾಧ್ಯಮ ಗೋಷ್ಠಿಗಳಲ್ಲೂ ಈ ಕುರಿತಂತೆ ಅವರು ಸಾರ್ವಜನಿಕವಾಗಿ ಸುದೀಪ್‌ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸುದೀಪ್‌ ಕೋರ್ಟ್ ಮೆಟ್ಟಿಲೇರಿದ್ದು, “ಕುಮಾರ್ ಹೇಳಿಕೆಯಿಂದ ನಾನು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ನನ್ನ ಮಾನಹಾನಿಯಾಗಿದೆ” ಎಂದು ಆರೋಪಿಸಿ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...