ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ದರ್ಶನ್ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು.
ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು
ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಹೈಕೋರ್ಟ್ ಕೇಳಿದೆ. ಅಲ್ಲದೆ ಆಕ್ಷೇಪ ಸಲ್ಲಿಸುವಂತೆ ಎಸ್.ಪಿ.ಪಿ. ಪ್ರಸನ್ನಕುಮಾರ್ ರಿಗೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದೆ.
ಈ ಹಿಂದೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಅ.14ರಂದು 57ನೇ ಸಿಸಿಎಚ್ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿತು. ಎ2 ಆರೋಪಿ ದರ್ಶನ್, ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲಾಗಿತ್ತು. ಎ 11 ನಾಗರಾಜು, ಎ 12 ಲಕ್ಷ್ಮ ಣ್ ಅವರ ಜಾಮೀನು ಅರ್ಜಿಯನ್ನೂ ವಜಾ ಮಾಡಿತ್ತು. ಇದೆ ವೇಳೆ ಎ8 ರವಿಶಂಕರ್, ಎ13 ದೀಪಕ್‌ಗೆ ಜಾಮೀನು ಮಂಜೂರು ಮಾಡಲಾಗಿತ್ತು.
