ಕೃತಿ ಚೌರ್ಯ ಪ್ರಕರಣ | ʼವರಾಹ ರೂಪಂʼ ಹಾಡಿನ ಪ್ರಸಾರಕ್ಕೆ ಮತ್ತೆ ತಡೆ

Date:

ʼವರಾಹ ರೂಪಂʼ ಹಾಡಿನ ಪ್ರಸಾರಕ್ಕೆ ತಡೆ ನೀಡಿದ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯ

- Advertisement -

ʼನವಸರಂʼ ಹಾಡಿನ ಟ್ಯೂನ್‌ ಕದ್ದ ಆರೋಪ ಎದುರಿಸುತ್ತಿರುವ ʼಕಾಂತಾರʼ ಚಿತ್ರತಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಕಾಂತಾರ’ ಚಿತ್ರದ ʼವರಾಹ ರೂಪಂʼ ಹಾಡಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಲಯಾಳಂನ ಜನಪ್ರಿಯ ʼನವರಸಂʼ ಹಾಡಿನ ಟ್ಯೂನ್‌ ಕದ್ದು ‘ವರಾಹ ರೂಪಂ’ ಹಾಡನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ವಿವಾದಕ್ಕೆ ಸಂಬಂಧಿಸಿ ಪ್ರಕರಣದ ವಿಚಾರಣೆ ನಡೆಸಿರುವ ಕೇರಳದ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯ ಹಾಡಿನ ಪ್ರಸಾರಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಗುರುವಾರ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಧೀಶ ಕೆ.ಇ ಸಾಹಿಲ್‌, ” ʼನವರಸಂʼ ಹಾಡಿನ ಸ್ಫೂರ್ತಿಯಿಂದಲೇ ʼವರಾಹ ರೂಪಂʼ ಹಾಡನ್ನು ಸೃಷ್ಟಿಸಿರುವುದಾಗಿ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಹಾಡಿನ ಮೂಲ ಹಕ್ಕನ್ನು ಹೊಂದಿರುವ ʼಮಾತೃಭೂಮಿ ಪಬ್ಲಿಕೇಶನ್‌ʼ ಮತ್ತು ಹಾಡಿನ ಸೃಷ್ಟಿಕರ್ತರಾದ ʼಥೈಕ್ಕುಡಂ ಬ್ರಿಡ್ಜ್‌ʼ ತಂಡಕ್ಕೆ ಕೃಪೆಯನ್ನು ನೀಡಬೇಕು. ವಿವಾದ ಇತ್ಯರ್ಥವಾಗುವ ವರೆಗೆ ಚಿತ್ರಮಂದಿರ ಮತ್ತು ಡಿಜಿಟಲ್‌ ವೇದಿಕೆಗಳಲ್ಲಿ ವಿವಾದಿತ ಹಾಡನ್ನು ಪ್ರಸಾರ ಮಾಡಬಾರದು” ಎಂದು ಮಧ್ಯಂತರ ಆದೇಶ ನೀಡಿದ್ದಾರೆ.

ʼಕಾಂತಾರʼ ಸಿನಿಮಾ ಬಿಡುಗಡೆಯಾದ ಕೆಲವೇ ದಿನಕ್ಕೆ ʼವರಾಹ ರೂಪಂʼ ಹಾಡು ʼನವರಸಂʼ ಆಲ್ಬಂನಂತಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಾದ ಬೆನ್ನಲ್ಲೇ ʼಥೈಕ್ಕುಡಂ ಬ್ರಿಡ್ಜ್‌ʼ ತಂಡ ಮತ್ತು ʼಮಾತೃಭೂಮಿ ಪಬ್ಲಿಕೇಶನ್‌ʼ, ʼಕಾಂತಾರʼ ಚಿತ್ರದ ನಿರ್ದೇಶಕ, ನಾಯಕ ನಟ ರಿಷಬ್‌ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್‌ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರು ಅವರುಗಳ ವಿರುದ್ಧ ಕೋಝಿಕ್ಕೋಡ್‌ ಮತ್ತು ಪಾಲಕ್ಕಾಡ್‌ ಪೊಲೀಸ್‌ ಠಾಣೆಗಳಲ್ಲಿ ಕೃತಿ ಚೌರ್ಯ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌ ಕೂಡ ವಿವಾದಿತ ʼವರಾಹ ರೂಪಂʼ ಹಾಡು ʼನವರಸಂʼ ಆಲ್ಬಂನ ನಕಲು ಎಂದು ಅಭಿಪ್ರಾಯ ಪಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರಿಗೇ ವೃತ್ತಿಪರತೆ ಹೆಚ್ಚೆಂದ ಅಮೋಲ್‌ ಪಾಲೇಕರ್‌

ಆದರೆ, ಅಜನೀಶ್‌ ಲೋಕನಾಥ್‌, ರಿಷಬ್‌ ಶೆಟ್ಟಿ ಮತ್ತು ಚಿತ್ರತಂಡ ತಾವು ʼನವಸರಂʼ ಹಾಡಿನ ಟ್ಯೂನ್‌ ಕದ್ದಿಲ್ಲ. ಆ ಹಾಡಿನಿಂದ ಸ್ಫೂರ್ತಿ ಪಡೆದು ʼವರಾಹ ರೂಪಂʼ ಹಾಡನ್ನು ರಚಿಸಿದ್ದೇವೆ. ಯಾವುದೇ ಕಾರಣಕ್ಕೂ ಥೈಕ್ಕುಡಂ ಬ್ರಿಡ್ಜ್‌ ತಂಡಕ್ಕೆ ಕೃಪೆ ನೀಡುವುದಿಲ್ಲ ಎಂದಿತ್ತು. ಕೆಲ ದಿನಗಳ ಹಿಂದೆ ಪ್ರಕರಣದ ವಿಚಾರವಾಗಿ ಈದಿನ.ಕಾಮ್‌ ಜೊತೆಗೆ ಮಾತನಾಡಿದ್ದ ʼಥೈಕ್ಕುಡಂ ಬ್ರಿಡ್ಜ್‌ʼ ತಂಡದ ವ್ಯವಸ್ಥಾಪಕ ಸುಜಿತ್‌, ನ್ಯಾಯ ಸಿಗುವ ವರೆಗೆ ಕಾನೂನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...