‘ನಾನು ಹೈದ್ರಾಬಾದ್‌ನವಳು’ ಎಂದ ರಶ್ಮಿಕಾಗೆ ರಕ್ಷಣೆಗಾಗಿ ಕೊಡವ ಮಂಡಳಿ ಮನವಿ

Date:

‘ನಾನು ಹೈದರಾಬಾದ್‌ನವಳು. ಇಲ್ಲಿನ (ತೆಲುಗು) ಕುಟುಂಬದವಳು’ ಎಂದಿದ್ದ ನಟಿ ರಶ್ಮಿಕಾ ಮಂದಣ್ಣಗೆ ರಕ್ಷಣೆ ನೀಡುವಂತೆ ಕೊಡವ ರಾಷ್ಟ್ರೀಯ ಮಂಡಳಿ (ಸಿಎನ್‌ಸಿ) ಮನವಿ ಮಾಡಿದೆ. ರಶ್ಮಿಕಾ ಅವರ ರಕ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಿಎನ್‌ಸಿ, ರಶ್ಮಿಕಾ ಅವರಿಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗವನ್ನು (ಎನ್‌ಸಿಡಬ್ಲ್ಯೂ) ಒತ್ತಾಯಿಸಿದೆ.

- Advertisement -

ರಶ್ಮಿಕಾ ತಾವು ಹೈದರಾಬಾದ್‌ ಅವರು ಎಂದು ಹೇಳಿಕೊಂಡು ಕರ್ನಾಟಕಕ್ಕೆ ಅಗೌರವ ತೋರಿಸಿದ್ದಾರೆ. ಅವರು ಹುಟ್ಟಿದ್ದು ಕರ್ನಾಟಕದಲ್ಲಿ, ಬೆಳೆದ್ದದ್ದು, ಓದಿದ್ದು ಕರ್ನಾಟಕದಲ್ಲಿ, ಚಿತ್ರರಂಗಕ್ಕೆ ಕಾಲಿಟ್ಟಿದ್ದೂ ಕರ್ನಾಟಕದಲ್ಲಿ-ಕನ್ನಡದಲ್ಲಿ. ಆದರೆ, ತಮಗೆ ‘ಸ್ಟಾರ್‌’ ಪಟ್ಟ ಸಿಕ್ಕಿದ ಕಾರಣಕ್ಕೆ ಕನ್ನಡವನ್ನೂ, ಕರ್ನಾಟಕವನ್ನೂ ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಕಾಂಗ್ರೆಸ್‌ ಶಾಸಕ ಗಣಿಗ ರವಿ ಕೂಡ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೀಗಾಗಿ, ನಟಿ ರಶ್ಮಿಕಾ ಅವರಿಗೆ ಭದ್ರತೆ ನೀಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಸಿಎನ್‌ಸಿ ಪತ್ರ ಬರೆದಿತ್ತು. ಇದೀಗ, ಮಹಿಳಾ ಆಯೋಗಕ್ಕೂ ಮನವಿ ಮಾಡಿದೆ.

ಸಿಎನ್‌ಸಿ ಅಧ್ಯಕ್ಷ ಎನ್‌ಯು ನಾಚಪ್ಪ ಅವರು ಎನ್‌ಸಿಡಬ್ಲ್ಯೂ ಅಧ್ಯಕ್ಷೆ ವಿಜಯ ಕೆ ರಹತ್ಕರ್ ಅವರಿಗೆ ಪತ್ರ ಬರೆದಿದ್ದು, “ರಶ್ಮಿಕಾ ಅವರಿಗೆ ಬೆದರಿಕೆ ಹಾಕಿರುವ ಶಾಸಕ ಗಣಿಗ ರವಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಬೇಕು. ಎಲ್ಲ ಮಹಿಳೆಯರಿಗೆ ಸುರಕ್ಷಿತ ಮತ್ತು ನ್ಯಾಯಯುತ ವಾತಾವರಣವನ್ನು ಸೃಷ್ಟಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಕೊಡವ ಸಮುದಾಯಕ್ಕೆ ಸೇರಿದ ರಶ್ಮಿಕಾ ಅವರು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಅನಗತ್ಯವಾಗಿ ಟೀಕೆಗಳು, ಮಾನಸಿಕ ಕಿರುಕುಳವನ್ನು ಅನುಭವಿಸುವಂತಾಗಿದೆ. ಅವರಿಗೆ ರಕ್ಷಣೆ ನೀಡಬೇಕು” ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

“ಕಿರುಕುಳ ಮತ್ತು ಬೆದರಿಕೆಯ ವಿರುದ್ಧ ಮಹಿಳೆಯರಿಗೆ, ವಿಶೇಷವಾಗಿ ಹಿಂದುಳಿದ, ಅಂಚಿನಲ್ಲಿರುವ ಸಮುದಾಯಗಳಿಗೆ ರಕ್ಷಣೆ ಮತ್ತು ಬೆಂಬಲ ನೀಡುವ ತುರ್ತು ಅಗತ್ಯವಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಇನ್ನು, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ನಟಿ, ಮಾಜಿ ಸಂಸದೆ ರಮ್ಯಾ, “ಕಲಾವಿದರು, ವಿಶೇಷವಾಗಿ ನಟಿಯರನ್ನು ರಾಜಕಾರಣಿಗಳು ಸುಲಭವಾಗಿ ಗುರಿಯಾಗಿಸಿಕೊಳ್ಳುತ್ತಾರೆ. ‘ತನ್ನ ಮೂಲವನ್ನು ಮರೆತಿರುವ ರಶ್ಮಿಕಾ ಮಂದಣ್ಣಗೆ ಪಾಠ ಕಲಿಸಬೇಕು’ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ. ಜನರನ್ನು ಬೆದರಿಸುವುದು ಎಂದಿಗೂ ಸರಿಯಲ್ಲ. ರಾಜಕಾರಣಿಗಳು ಹೀಗೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಈ ಹಿಂದೆ, ನನಗೆ ಕನ್ನಡ ಬರುವುದಿಲ್ಲ ಎಂದು ಹೇಳಿಕೆ ನೀಡಿಯೂ ರಶ್ಮಿಕಾ ಮಂದಣ್ಣ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...