ʼಮಾದೇವʼ ಪ್ರಿ ರಿಲೀಸ್‌ ಇವೆಂಟ್; ‘ಎದೇಲಿ ತಂಗಾಳಿ’ ಹಾಡು ಬಿಡುಗಡೆ

Date:

Advertisements

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂತೆರೊ ಮುಖ್ಯ ಭೂಮಿಕೆಯಲ್ಲಿರುವ “ಮಾದೇವ” ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ ಇತ್ತೀಚೆಗೆ ಜರುಗಿದ್ದು, ಪ್ರಸನ್ನ ಕುಮಾರ್ ಸಾಹಿತ್ಯ, ಪ್ರದ್ಯೋತನ್ ಸಂಗೀತ ನೀಡಿರುವ “ಎದೇಲಿ ತಂಗಾಳಿ” ಎಂಬ ಹಾಡು ಬಿಡುಗಡೆಯಾಗಿದೆ. ಚಿತ್ರ ಇದೇ ಜೂನ್‌ 6ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಚಿತ್ರದ ಕುರಿತು ಮಾತನಾಡಿರುವ ನಟ ವಿನೋದ್‌, “ಈ ಸಿನಿಮಾ ನನ್ನ ವೃತ್ತಿಜೀವನದಲ್ಲೇ ಒಂದು ವಿಭಿನ್ನ ಪ್ರಯತ್ನ. ಈ ಚಿತ್ರ ಬೇರೆಯದೇ ಹೆಸರು ತಂದುಕೊಡುತ್ತದೆ. ಹ್ಯಾಂಗ್ ಮ್ಯಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರ ಏನಾದರೂ ಬೇರೆ ಭಾಷೆಗಳಿಗೆ ಹೋದರೆ, ಮೊದಲು ಹೋಗೋದು ಸಂಗೀತ ನಿರ್ದೇಶಕ ಪ್ರದ್ಯೋತನ್‍. ಅಷ್ಟು ಪ್ರತಿಭಾವಂತ. ಇಡೀ ಚಿತ್ರಕ್ಕೆ ಜೀವ ಕೊಟ್ಟಿದ್ದಾರೆ. ಮಾಲಾಶ್ರೀ ಅವರ ಜೊತೆಗೆ ನನ್ನ ದೃಶ್ಯಗಳಿಲ್ಲ. ಆದರೆ, ವಿಭಿನ್ನವಾದ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವರಿಗೊಂದು ಅದ್ಭುತವಾದ ಡೈಲಾಗ್‍ ಇದೆ. ಸೋನಲ್, ಶ್ರೀನಗರ ಕಿಟ್ಟಿ, ಶೃತಿ ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಇದೊಂದು ಒಳ್ಳೆಯ ಸಿನಿಮಾ ಆಗುತ್ತದೆ. ಜೂನ್‍ 06ರಂದು ಚಿತ್ರ ತೆರೆಕಾಣಲಿದೆ. ಎಲ್ಲರೂ ನೋಡಿ ಆಶೀರ್ವಾದ ಮಾಡಿ” ಎಂದಿದ್ದಾರೆ.

WhatsApp Image 2025 06 02 at 12.33.27 PM

ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ, “ಈ ಚಿತ್ರ ನೋಡಿ ಹೊರ ಬಂದ ಮೇಲೆ, ವಿನೋದ್‍ ಪ್ರಭಾಕರ್ ಅವರ ಜೊತೆಗೆ ಶ್ರುತಿ ಅವರು ಸಹ ಮನಸ್ಸಲ್ಲಿ ಉಳಿಯುತ್ತಾರೆ. ಅವರ ಪಾತ್ರ ಭಯ ಹುಟ್ಟಿಸುತ್ತೆ. ಅವರು ಎಲ್ಲರಿಗೂ ಇಷ್ಟವಾಗುತ್ತಾರೆ ಎಂಬ ನಂಬಿಕೆ ಇದೆ. ನಮಗೆ ಒಳ್ಳೆಯ ಪಾತ್ರಧಾರಿಗಳು ಸಿಕ್ಕರು. ಅವರು ಅಭಿನಯಿಸುತ್ತಿದ್ದರೆ ಕರೆಕ್ಷನ್‍ ಹೇಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ವಿನೋದ್‍ ಪ್ರಭಾಕರ್ ಮೊದಲ ಶಾಟ್‍ನಲ್ಲೇ ಅದ್ಭುತವಾದ ಅಭಿನಯ ನೀಡಿದರು. ಇದೊಂದು ಎಮೋಷನಲ್‍ ಜರ್ನಿ. ಚಿತ್ರ ನೋಡಿ ಪ್ರೇಕ್ಷಕರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisements

“ರಾಬರ್ಟ್ ಚಿತ್ರದ ನಂತರ ನಾನು ಹಾಗೂ ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಹಿರಿಯ ಕಲಾವಿದರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ” ಎಂದಿದ್ದಾರೆ ನಾಯಕಿ ಸೋನಲ್ ಮೊಂತೆರೊ.

ಇದನ್ನೂ ಓದಿ: ಬೆಂಗಳೂರು | ನಟ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ; ಇಬ್ಬರ ವಿರುದ್ಧ ಎಫ್‌ಐಆರ್‌

ನಟಿ ಶೃತಿ ಮಾತನಾಡಿ, “ಚಿತ್ರರಂಗಕ್ಕೆ ಬಂದು 35 ವರ್ಷಗಳಾಗಿವೆ. 130 ಚಿತ್ರಗಳಲ್ಲಿ ನಟಿಸಿದ್ದೇನೆ. ಆ ಎಲ್ಲಾ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಹೆಚ್ಚು ತೃಪ್ತಿ ಸಿಕ್ಕಿದೆ. ಈ ತರಹದ ಪಾತ್ರಗಳಿಗೆ ನನ್ನನ್ನು ಕಲ್ಪಿಸಿಕೊಳ್ಳುತ್ತಾರೆ ಎಂಬುದೇ ಸಂತೋಷ. ಕಲಾವಿದೆಯಾಗಿ ನಾನು ಗೆದ್ದೆ ಎಂದು ನನಗೆ ಅನಿಸುವುದೇ ಆಗ. ಏಕತಾನತೆಯ ಪಾತ್ರಗಳಿದ್ದರೆ ಕಲಿಕೆ ಸಾಧ್ಯವಿರುವುದಿಲ್ಲ. ಈ ತರಹದ ಪಾತ್ರ ಕೊಟ್ಟಾಗ ಮೊದಲು ನಿರ್ದೇಶಕರಿಗೆ ಸವಾಲಿರುತ್ತದೆ. ಅವರ ಧೈರ್ಯವನ್ನು ಮೆಚ್ಚಬೇಕು. ನಾಯಕಿಯಾಗಿದ್ದಾಗ ಈ ತರಹದ ವಿಭಿನ್ನ ಪಾತ್ರ ಮಾಡುವುದಕ್ಕೆ ಅವಕಾಶ ಸಿಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಈ ಚಿತ್ರದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆ. ಆ ಸವಾಲು ತೆಗೆದುಕೊಂಡೆ. ಅವರ ನಿರೀಕ್ಷೆಗೆ ತಕ್ಕಂತೆ ನಟಿಸಿದ್ದೀನಿ” ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ನಿರ್ಮಾಪಕ ಆರ್ ಕೇಶವ್, ಸಂಗೀತ ನಿರ್ದೇಶಕ ಪ್ರದ್ಯೋತನ್‍ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X