ಮಲಯಾಳಂನ ಹಿರಿಯ ನಟ ಇನ್ನೋಸೆಂಟ್‌ ಇನ್ನಿಲ್ಲ

Date:

  • 700ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಇನ್ನೋಸೆಂಟ್‌
  • ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟ

ಉಸಿರಾಟದ ತೊಂದರೆಯಿಂದ ಇತ್ತೀಚೆಗೆ ಆಸ್ಪತ್ರೆ ಸೇರಿದ್ದ ಮಲಯಾಳಂನ ಹಿರಿಯ ನಟ, ಮಾಜಿ ಸಂಸದ ಇನ್ನೋಸೆಂಟ್‌ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

ಈ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ 75 ವರ್ಷದ ಇನ್ನೋಸೆಂಟ್‌ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಮಾರ್ಚ್‌ 3ರಂದು ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟ ಕೊನೆಯುಸಿರೆಳೆದಿದ್ದಾರೆ. ಇನ್ನೋಸೆಂಟ್‌ ಅವರ ಅಗಲಿಕೆಗೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

2012ರಲ್ಲಿ ಇನ್ನೋಸೆಂಟ್‌ ಗಂಟಲು ಕ್ಯಾನ್ಸರ್‌ಗೆ ತುತ್ತಾಗಿದ್ದರು. ನಿರಂತರ ಚಿಕಿತ್ಸೆಯ ಫಲವಾಗಿ 2015ರ ಹೊತ್ತಿಗೆ ಮಾರಕ ಕ್ಯಾನ್ಸರ್‌ನಿಂದ ಮುಕ್ತರಾಗಿದ್ದರು. ತಾವು ಕ್ಯಾನ್ಸರ್‌ ಗೆದ್ದ ಪರಿಯನ್ನು ಕೃತಿಯನ್ನಾಗಿಸಿದ್ದ ಇನ್ನೋಸೆಂಟ್‌, ಕ್ಯಾನ್ಸರ್‌ ರೋಗಿಗಳಿಗೆ ನೆರವಾಗಿದ್ದರು.

ಕೇವಲ ನಟರಾಗಿ ಮಾತ್ರವಲ್ಲದೆ, ರಾಜಕಾರಣದಲ್ಲೂ ಹೆಸರು ಮಾಡಿದ್ದ ಇನ್ನೋಸೆಂಟ್‌, 2014ರಲ್ಲಿ ಕೇರಳದ ಚಾಲಕುಡಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2003ರಿಂದ 2018ರ ವರೆಗೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಈ ಸುದ್ದಿಯನ್ನು ಓದಿದ್ದೀರಾ? ಬಾಲಿವುಡ್‌ ತೊರೆದ ಅಸಲಿ ಕಾರಣ ಬಿಚ್ಚಿಟ್ಟ ಪ್ರಿಯಾಂಕಾ ಚೋಪ್ರಾ

1972ರಲ್ಲಿ ತೆರೆಕಂಡ ʼನೃತ್ಯಶಾಲಾʼ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗ ಪ್ರವೇಶಿಸಿದ್ದ ಇನ್ನೋಸೆಂಟ್‌, 5 ದಶಕಗಳ ಕಾಲ 700ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 2022ರಲ್ಲಿ ಪೃಥ್ವಿರಾಜ್‌ ಸುಕುಮಾರನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಕಡುವʼ ಚಿತ್ರದಲ್ಲಿ ಇನ್ನೋಸೆಂಟ್‌ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಲಿದ್ದಾರೆ ಅಶ್ವಿನಿ ಪುನೀತ್​ ರಾಜ್‌ಕುಮಾರ್

ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯಲಿರುವ 'ಬೆಂಗಳೂರು ಕಂಬಳ'ಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್...

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...