ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
45 ವರ್ಷದ ವಿನೋದ್ ಥಾಮಸ್ ಹೊಟೇಲ್ ಆವರಣದಲ್ಲಿ ತುಂಬಾ ಸಮಯ ಪಾರ್ಕ್ ಮಾಡಿದ್ದ ಕಾರಿನೊಳಗೆ ನಟನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?
ವಿನೋದ್ ಥಾಮಸ್ ಸಾವಿನ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದು ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಈ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಮಸ್ ಅವರು ‘ಅಯ್ಯಪ್ಪನುಂ ಕೋಶಿಯುಂ’, ‘ನತ್ತೋಲಿ ಒರು ಚೆರಿಯ ಮೀನಲ್ಲ’, ‘ಒರು ಮುರೈ ವಂದ್ ಪಾತಾಯ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದರು.