ಮಲಯಾಳಂ ಸಿನಿಮಾ ರಂಗದ ದಿಗ್ಗಜ ಶ್ರೀನಿವಾಸನ್ ನಿಧನ

Date:

ನಟ, ಬರಹಗಾರ ಮತ್ತು ಚಲನಚಿತ್ರ ನಿರ್ಮಾಪಕರಾಗಿ ಮಲಯಾಳಂ ಸಿನಿಮಾ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಶ್ರೀನಿವಾಸನ್ ಶನಿವಾರ ನಿಧನರಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮಲಯಾಳಂ ಸಿನಿಮಾ ರಂಗದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

- Advertisement -

ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶ್ರೀನಿವಾಸನ್ ಅವರನ್ನು ಡಯಾಲಿಸಿಸ್‌ಗೆ ಕರೆದೊಯ್ಯುತ್ತಿದ್ದಾಗ ಅಸ್ವಸ್ತರಾಗಿದ್ದು ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಸದ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅಂತ್ಯಕ್ರಿಯೆಯ ಬಗ್ಗೆ ಅಧಿಕ ಮಾಹಿತಿ ನೀಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ

1956ರ ಏಪ್ರಿಲ್ 6ರಂದು ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ಬಳಿಯ ಪಟ್ಯಂನಲ್ಲಿ ಜನಿಸಿದ ಶ್ರೀನಿವಾಸನ್, ಮಲಯಾಳಂ ಸಿನಿಮಾ ರಂಗದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಸಾಮಾಜಿಕ ವಿಚಾರಗಳ್ನು ವಿಂಡಬನಾತ್ಮಕವಾಗಿ ಸಿನಿಮಾದಲ್ಲಿ ಮುನ್ನೆಲೆಗೆ ತರುವ ಕಾರ್ಯವನ್ನು ಮಾಡುತ್ತಾ ಬದಿದ್ದಾರೆ. 1976ರಲ್ಲಿ ಪಿ ಎ ಬ್ಯಾಕರ್ ಅವರ ಮಣಿಮುಳಕ್ಕಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, 1979ರಲ್ಲಿ ಸಂಘಗಾನಂ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸುಮಾರು ಐದು ದಶಕಗಳ ವೃತ್ತಿಜೀವನದಲ್ಲಿ, ಶ್ರೀನಿವಾಸನ್ 225ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಸಿನಿಮಾಕ್ಕೆ ಉತ್ತಮ ಚಿತ್ರಕಥೆಗಳನ್ನು ಬರೆದಿದ್ದಾರೆ. ನಾಡೋಡಿಕ್ಕಾಟ್ಟು, ವರವೇಲ್ಪು, ತಾಳಯಾನ ಮಂತ್ರಂ, ಸಂದೇಶಂ, ಮಿಧುನಂ, ಒರುವುದ ಮರವದಯನ್, ಒರುವುದ್ಯಾನ ಮರವದಯನ್, ಮೊದಲಾದವುಗಳು ಅವರ ಬರವಣಿಗೆಗಳು.

ವಡಕ್ಕುನೋಕ್ಕಿಯಂತ್ರಂ ಮತ್ತು ಚಿಂತವಿಷ್ಟಾಯ ಶ್ಯಾಮಲಾದಲ್ಲಿ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದರು. ವಡಕ್ಕುನೋಕ್ಕಿಯಂತ್ರಂ ಅತ್ಯುತ್ತಮ ಚಲನಚಿತ್ರಕ್ಕಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡರೆ, ಚಿಂತವಿಷ್ಟಾಯ ಶ್ಯಾಮಲಾ ಇತರ ಸಾಮಾಜಿಕ ಸಮಸ್ಯೆಗಳ ಮೇಲಿನ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗಳಿಸಿದೆ. ಜತೆಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಜನಪ್ರಿಯ ಚಲನಚಿತ್ರವೆಂದು ಗುರುತಿಸಲ್ಪಟ್ಟಿದೆ.

ಶ್ರೀನಿವಾಸನ್ ತಮ್ಮ ವೃತ್ತಿಜೀವನದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ದಕ್ಷಿಣ ಮತ್ತು ಆರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಗೌರವಗಳನ್ನು ಪಡೆದಿದ್ದಾರೆ. ಸಂದೇಶಂ ಮತ್ತು ಮಜಯೇತುಮ್ ಮುಂಪೆ ಚಿತ್ರಗಳಿಗೆ ಅವರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...