ಮಲಯಾಳಂನ ಹಿರಿಯ ನಟ ಮಾಮುಕೋಯ ಇನ್ನಿಲ್ಲ

Date:

ಫುಟ್ಬಾಲ್‌ ಪಂದ್ಯ ವೀಕ್ಷಣೆ ವೇಳೆ ಕುಸಿದು ಬಿದ್ದಿದ್ದ ಮಾಮುಕೋಯ

450ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟನೆ

ಮಲಯಾಳಂ ಚಿತ್ರರಂಗದ ಹಿರಿಯ ನಟ ಮಾಮುಕೋಯ ಬುಧವಾರ ಮಧ್ಯಾಹ್ನ ಕೋಝೀಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

76 ವರ್ಷದ ಮಾಮಕೋಯ ಕಳೆದ ಸೋಮವಾರ ಕಾಳಿಕಾವು ಎಂಬಲ್ಲಿ ನಡೆದ ಫುಟ್ಬಾಲ್‌ ಪಂದ್ಯಾವಳಿಯನ್ನು ವೀಕ್ಷಿಸುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ವಂಡೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದರಿಂದ ವೈದ್ಯರ ಸಲಹೆಯಂತೆ ಮಂಗಳವಾರ ಕೋಝೀಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ರಂಗಭೂಮಿ ಕಲಾವಿದರಾಗಿದ್ದ ಮಾಮುಕೋಯ 1979ರಲ್ಲಿ ನಿಲಂಬೂರ್‌ ಬಾಲನ್‌ ನಿರ್ದೇಶನದ ʼಅನ್ಯಾರುಡೆ ಭೂಮಿʼ ಚಿತ್ರದಲ್ಲಿ ಪ್ರಮುಕ ಪಾತ್ರದಲ್ಲಿ ನಟಿಸುವ ಮೂಲಕ ಮಲಯಾಳಂ ಚಿತ್ರರಂಗ ಪ್ರವೇಶಿಸಿದರು. ನೋಡ ನೋಡುತ್ತಲೇ ಹಾಸ್ಯ ನಟನಾಗಿ ಹೆಸರು ಮಾಡಿದ ಮಾಮುಕೋಯ, ʼಗಾಂಧಿನಗರ ಸೆಕೆಂಡ್‌ ಸ್ಟ್ರೀಟ್‌ʼ, ʼಧ್ವನಿʼ, ʼಅರ್ಧಂʼ, ʼಸ್ವಾಗತಂʼ, ʼಜೋಕರ್‌ʼ, ʼಉಸ್ತಾದ್‌ ಹೋಟೆಲ್‌ʼ ಸೇರಿದಂತೆ ಮಲಯಾಳಂನ 450ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ: ತಾರಾ ವಿರುದ್ಧ ಪ್ರಕರಣ ದಾಖಲು

ಕಿರುತೆರೆಯಲ್ಲೂ ಜನಪ್ರಿಯತೆ ಗಳಿಸಿದ್ದ ಮಾಮುಕೋಯ ತಮಿಳಿನ ʼಅರಂಗೇತ್ರ ವೇಲೈʼ, ʼಕಾಸುʼ, ʼಮರಕ್ಕರ್‌ʼ, ʼಕೋಬ್ರಾʼ ಮುಂತಾದ ಚಿತ್ರಗಳಲ್ಲೂ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...