ಆದಿಪುರುಷ್‌ ವಿವಾದ | ಚಿತ್ರ ಸಾಹಿತಿ ಮನೋಜ್‌ ಮುಂತಾಶಿರ್‌ಗೆ ಬಲಪಂಥೀಯರಿಂದ ಜೀವ ಬೆದರಿಕೆ

Date:

  • ʼಆದಿಪುರುಷ್‌ʼ ಸಿನಿಮಾ ನಿಷೇಧಿಸುವಂತೆ ಬಲಪಂಥೀಯರ ಆಗ್ರಹ
  • ಹನುಮಂತನ ಪಾತ್ರಕ್ಕೆ ಆಕ್ಷೇಪಾರ್ಹ ಸಂಭಾಷಣೆ ಬರೆದಿರುವ ಮನೋಜ್‌

ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶಾದ್ಯಂತ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಬಲಪಂಥೀಯ ಸಂಘಟನೆಗಳು ಪಟ್ಟು ಹಿಡಿದಿವೆ. ಇದೇ ವೇಳೆ ಚಿತ್ರಕ್ಕೆ ಸಂಭಾಷಣೆ ಬರೆದಿರುವ ಚಿತ್ರ ಸಾಹಿತಿ ಮನೋಜ್‌ ಮುಂತಾಶಿರ್‌ಗೆ ಜೀವ ಬೆದರಿಕೆ ಎದುರಾಗಿದ್ದು, ಮುಂಬೈ ಪೊಲೀಸರು ಅಗತ್ಯ ಭದ್ರತೆ ಒದಗಿಸಿದ್ದಾರೆ.

- Advertisement -

ʼಆದಿಪುರುಷ್‌ʼ ಚಿತ್ರದಲ್ಲಿರುವ ಹನುಮಂತನ ಪಾತ್ರಕ್ಕೆ “ಕಪಡಾ ತೇರೆ ಬಾಪ್‌ ಕಾ, ತೇಲ್‌ ತೇರೆ ಬಾಪ್‌ ಕಾ, ಜಲೇಗಿ ಭೀ ತೆರೆ ಬಾಪ್‌ ಕಿ” ಎಂಬ ಕೀಳು ಮಟ್ಟದ ಸಂಭಾಷಣೆಗಳನ್ನು ಮನೋಜ್‌ ಬರೆದಿದ್ದಾರೆ ಎಂದು ಬಲಪಂಥೀಯ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. ಚಿತ್ರದ ಪ್ರದರ್ಶನವನ್ನು ವಿರೋಧಿಸಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ʼಕ್ಷತ್ರೀಯ ಕರ್ಣಿ ಸೇನಾʼ ಸಂಘಟನೆಯ ಮುಂಖಡ ರಾಜ್‌ ಶೇಖಾವತ್‌ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದಾರೆ. ʼಆದಿಪುರುಷ್‌ʼ ಚಿತ್ರತಂಡ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಚಿತ್ರದ ನಿರ್ದೇಶಕ ಓಂ ರಾವತ್‌ ಮತ್ತು ಸಂಭಾಷಣೆಕಾರ ಮನೋಜ್‌ ಮುಂತಾಶಿರ್‌ ಇಬ್ಬರನ್ನೂ ಕೊಲ್ಲುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹನುಮಂತ ಮತ್ತು ರಾವಣನ ಕುರಿತ ಸಂಭಾಷಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಹಲವು ಬಲಪಂಥೀಯರು ಮನೋಜ್‌ಗೆ ಜೀವ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಬೆದರಿಕೆ ಸಂದೇಶಗಳು ಮತ್ತು ಕರೆಗಳು ಬಂದ ಬೆನ್ನಲ್ಲೇ ಭದ್ರತೆ ಕೋರಿ ಮನೋಜ್‌ ಮುಂಬೈ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಚಿತ್ರ ಸಾಹಿತಿಯ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಆದಿಪುರುಷ್‌ ಚಿತ್ರದಲ್ಲಿ ತಾವು ಬರೆದ ಸಂಭಾಷಣೆಗಳು ವಿವಾದಕ್ಕೆ ಸಿಲುಕುತ್ತಲೇ ಎಚ್ಚೆತ್ತುಕೊಂಡ ಮನೋಜ್‌, ಆಕ್ಷೇಪಾರ್ಹ ಸಂಭಾಷಣೆಗಳನ್ನು ಒಂದು ವಾರದ ಒಳಗಾಗಿ ಸಿನಿಮಾದಿಂದ ತೆಗೆದು ಹಾಕಲಾಗುವುದು ಎಂದು ತಿಳಿಸಿದ್ದರು. ಜೊತೆಗೆ ಹಿಂದೂಗಳ ಕ್ಷಮೆಯಾಚಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸದಂತೆಯೂ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...