ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ : ನಟ ಕಿಶೋರ್ ಕುಮಾರ್ ಹೀಗೆ ಅಂದಿದ್ದೇಕೆ?

Date:

ಕೇಂದ್ರ ಸರ್ಕಾರದ ಕೆಲ ನಡೆಗಳನ್ನು ನೇರವಾಗಿ ಖಂಡಿಸುತ್ತಿರುವ ಬಹುಭಾಷಾ ನಟ, ಕಿಶೋರ್‌ ಕುಮಾರ್‌ ಅವರು, ‘ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ’ ಎಂದು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ.

ಕಾರಣ ಇಷ್ಟೇ. ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಹಂಚಿಕೊಂಡಿದ್ದ ಪೋಸ್ಟ್‌ ಅನ್ನು ಇನ್‌ಸ್ಟಾಗ್ರಾಮ್ ನಿಯಮ ಉಲ್ಲಂಘನೆ ಎಂದು ಉಲ್ಲೇಖಿಸಿ ಅಳಿಸಿ ಹಾಕಿದೆ.

ಈ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಟಾಂಗ್ ನೀಡಿರುವ ನಟ ಕಿಶೋರ್, ‘ಮೋದಿಯವರಿದ್ದರೆ ಇದೆಲ್ಲವೂ ಸಾಧ್ಯ’ ಎಂದು ಹೇಳಿ, ಇನ್‌ಸ್ಟಾಗ್ರಾಮ್ ಖಾತೆ ಬ್ಲಾಕ್ ಮಾಡಿರುವ ಸ್ಕ್ರೀನ್ ಶಾಟ್‌ ಅನ್ನು ಹಂಚಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ಬಳಿಕದ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವಿವರವಾಗಿ ಬರೆದುಕೊಂಡಿರುವ ಬಹುಭಾಷಾ ನಟ, ‘ಇನ್‌ಸ್ಟಾಗ್ರಾಮ್‌ನ ಈ ನಿಯಮಗಳು ನನ್ನ ನೊಂದು ಬೆಂದ ಮಣಿಪುರಕ್ಕೆ , ಕಾಶ್ಮೀರಕ್ಕೆ , ಗುಜರಾತಿಗೆ, ನೂಹ್‌ಗೆ, ಹಾಥರಸ್‌ಗೆ, ಸಿಂಘು ಬಾರ್ಡರಿಗೆ, ಲಖೀಮ್ ಪುರ್ ಖೇರಿಗೆ , ಧರ್ಮಸ್ಥಳಕ್ಕೆ, ದೇಶದ ಉದ್ದಗಲಕ್ಕೆ ಅನ್ವಯಿಸಿಬಿಟ್ಟಿದ್ದರೆ ಎಷ್ಟು ಚೆಂದ. ಇವರು ಹೇಳುವ ADULT SEXUAL EXPLOITATION ಅನ್ನು ನನ್ನ ದೇಶದ ಮನಃಪಟಲದಿಂದ ನನ್ನ ಪೋಸ್ಟಿನ ಹಾಗೆ ಅಳಿಸಿಬಿಡಲು ಸಾಧ್ಯವಿದ್ದಿದ್ದರೆ ಎಷ್ಟು ಚೆಂದ’ ಎಂದು ಬರೆದುಕೊಂಡಿದ್ದಾರೆ.

‘ನಾನೋ, ನಾನು ಹಾಕುವ ಪೋಸ್ಟೊ, ಮೋದಿಯೋ, ಗೋದಿಯೋ ಮುಖ್ಯವೇ ಅಲ್ಲ . ಈ ದೇಶವನ್ನು , ಕುವೆಂಪು ಗಾಂಧಿ ಅಂಬೇಡ್ಕರ್ ಬುದ್ಧ ಬಸವರ ಕನಸಿನ ಸರ್ವ ಸಮಾನತೆಯ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳುತ್ತೇವೆಯಾ ಎನ್ನುವುದಷ್ಟೇ ಮುಖ್ಯ’ ಎಂದು ತನ್ನ ಆಗ್ರಹವನ್ನು ಬಹುಭಾಷಾ ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್...

ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

ಬಹುನಿರೀಕ್ಷಿತ ಮಲಯಾಳಂ ಚಿತ್ರ 'ಆಡು ಜೀವಿತಂ' ಅಥವಾ 'ದಿ ಗೋಟ್‌ಲೈಫ್' ಮಾರ್ಚ್...

ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ...