ಬಾಲಿವುಡ್ ಸಂಗೀತ ನಿರ್ದೇಶಕ ಪ್ರೀತಮ್ ಕಚೇರಿಯಲ್ಲಿ 40 ಲಕ್ಷ ರೂ. ಕಳವು

Date:

ಬಾಲಿವುಡ್ ಸಂಗೀತ ಸಂಯೋಜಕ ಪ್ರೀತಮ್ ಚಕ್ರವರ್ತಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು 40 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ, ಅವರ ವ್ಯವಸ್ಥಾಪಕರು ಮಲಾಡ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

- Advertisement -

ಪೊಲೀಸರ ಪ್ರಕಾರ, ಶಂಕಿತ ಆರೋಪಿಯನ್ನು ಆಶಿಶ್ ಸಾಯಲ್ (32) ಎಂದು ಗುರುತಿಸಲಾಗಿದ್ದು, ಆತನ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಘಟನೆಯು ಫೆಬ್ರವರಿ 4ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಸಂಭವಿಸಿದೆ. ನಿರ್ಮಾಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗೋರೆಗಾಂವ್‌ನಲ್ಲಿರುವ ಸಂಗೀತ ಸಂಯೋಜಕ ಪ್ರೀತಮ್ ಅವರ ಸಂಗೀತ ಸ್ಟುಡಿಯೊ ಯೂನಿಮಸ್ ರೆಕಾರ್ಡ್ ಪ್ರೈವೇಟ್ ಲಿಮಿಟೆಡ್‌ಗೆ ಆಗಮಿಸಿ, 40 ಲಕ್ಷ ರೂ. ನಗದು ಹೊಂದಿರುವ ಬ್ಯಾಗ್‌ಅನ್ನು ಅವರ ವ್ಯವಸ್ಥಾಪಕ ವಿನೀತ್ ಚೆಡ್ಡಾಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಚೆಡ್ಡಾರೊಂದಿಗೆ ಸಾಯಲ್, ಅಹ್ಮದ್ ಖಾನ್ ಹಾಗೂ ಕಮಲ್ ದಿಶಾ ಕೂಡಾ ಉಪಸ್ಥಿತರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

“ನಗದು ಸ್ವೀಕರಿಸಿದ ವ್ಯವಸ್ಥಾಪಕರು, ಅದನ್ನು ಕಚೇರಿಯಲ್ಲಿದ್ದ ಟ್ರಾಲಿ ಬ್ಯಾಗ್‌ನಲ್ಲಿಟ್ಟಿದ್ದಾರೆ. ಇದರ ಬೆನ್ನಿಗೇ, ಕೆಲವು ದಾಖಲೆಗಳಿಗೆ ಪ್ರೀತಮ್ ಅವರ ಸಹಿ ಪಡೆಯಲು ಅದೇ ಕಟ್ಟಡದಲ್ಲಿರುವ ಪ್ರೀತಮ್ ಅವರ ನಿವಾಸಕ್ಕೆ ತೆರಳಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ಕಚೇರಿಗೆ ಮರಳಿ ಬಂದಾಗ, ತಾನು ನಗದು ಇಟ್ಟಿದ್ದ ಟ್ರಾಲಿ ಬ್ಯಾಗ್ ಕಾಣೆಯಾಗಿರುವುದನ್ನು ಚೆಡ್ಡಾ ಗಮನಿಸಿದ್ದಾರೆ. ಈ ಕುರಿತು ಅವರು ಮೊದಲಿಗೆ ಇತರ ಸಿಬ್ಬಂದಿಗಳನ್ನು ವಿಚಾರಿಸಿದಾಗ ಆ ಬ್ಯಾಗನ್ನು ಪ್ರೀತಮ್ ಅವರ ನಿವಾಸಕ್ಕೆ ಕೊಂಡೊಯ್ಯುವ ಸೋಗಿನಲ್ಲಿ ಸಾಯಲ್ ಅದನ್ನು ಕಚೇರಿಯಿಂದ ಹೊತ್ತೊಯ್ದರು ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...