ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ

Date:

ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ನಟ ಶಬರೀಶ್ ಎಂಬುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

- Advertisement -

ನಿರ್ದೇಶಕ ನಂದ ಕಿಶೋರ್ ತಮ್ಮಿಂದ 22 ಲಕ್ಷ ರೂ ಹಣ ಪಡೆದುಕೊಂಡಿದ್ದರು. ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಹಣ ವಾಪಸ್ ಕೊಡುವಂತೆ ಕೇಳಿದರೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ನಟ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂಬಂಧ ನಟ ಶಬರೀಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ​​ಗೆ ಈ ಬಗ್ಗೆ ದೂರು ನೀಡುವುದಾಗಿ ಹೇಳಿದ್ದು, ಕೂಡಲೇ ವಾಣಿಜ್ಯ ಮಂಡಳಿ ತನ್ನ ದೂರು ಸ್ವೀಕರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್; ಮೂರು ದಿನದಲ್ಲಿ ಉತ್ತರಿಸಲು ಸೂಚನೆ

ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶಬರೀಶ್ ಅವರನ್ನು ಸಿಸಿಎಲ್​​ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ಇದಕ್ಕಾಗಿ ಶಬರೀಶ್ ತನ್ನ ಮನೆಯಲ್ಲಿದ್ದ ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೂ ನಂದ ಕಿಶೋರ್ ಅವರು ತಮಗೆ ಹಣ ಮರಳಿಸಿಲ್ಲ ಎಂದು ಶಬರೀಶ್ ಆರೋಪಿಸಿದ್ದಾರೆ. ಹಣ ಮರಳಿಸುವಂತೆ ಕೇಳಿದರೆ ಬೆದರಿಕೆ ಹಾಕುತ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸಿದರು. ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನಗೆ ಮೋಸ ಮಾಡಿದ್ದಾರೆ. ನಾನು ಕೊಟ್ಟ ಹಣವೂ ವಾಪಸ್ ಕೊಟ್ಟಿಲ್ಲ. ಸಿನಿಮಾದಲ್ಲಿ ಅವಕಾಶವನ್ನು ಕೊಡಲಿಲ್ಲ, ನಾನು ಸಿಸಿಎಲ್‌ನಲ್ಲಿ ಆಡುವ ಕನಸು ಕಟ್ಟಿಕೊಂಡಿದ್ದೆ. ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಆವೃತ್ತಿ ಆಡಿದ್ದೇನೆ. ಹಣ ಕೇಳಿದರೆ ನಿನ್ನ ಕೆಸಿಸಿಯಿಂದ ಹೊರ ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಶಬರೀಶ್ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...