ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಮಳ್ಳಿ ಪೆಳ್ಳಿʼ ಟೀಸರ್‌

Date:

ಮೇ ತಿಂಗಳಲ್ಲಿ ತೆರೆ ಕಾಣಲಿದೆ ನರೇಶ್‌, ಪವಿತ್ರಾ ಲೋಕೇಶ್‌ ನಟನೆಯ ಚಿತ್ರ

- Advertisement -

ಟೀಕಾಕಾರಿಗೆ ತಿರುಗೇಟು ನೀಡಲು ಸಿನಿಮಾ ನಿರ್ಮಿಸಿದ ಸ್ಟಾರ್‌ ದಂಪತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತೆಲುಗಿನ ಖ್ಯಾತ ನಟ ನರೇಶ್‌ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್‌ ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಈ ಸ್ಟಾರ್‌ ಜೋಡಿಯ ಸಂಬಂಧ ಭಾರೀ ಚರ್ಚೆಗೆ ಕಾರಣವಾಗಿತ್ತು. ನರೇಶ್‌ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರೇ ಮಾಧ್ಯಮಗಳ ಎದುರು ನರೇಶ್‌ ತಮಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದರು. ವಿವಾದದ ನಡುವೆಯೇ ಹಸೆಮಣೆ ಏರಿದ್ದ ಈ ಜೋಡಿ ತಮ್ಮ ಪ್ರೀತಿ ಮತ್ತು ಮದುವೆಯ ಕಥೆಯನ್ನು ತೆರೆಗೆ ಅಳವಡಿಸಿದ್ದು, ಚಿತ್ರಕ್ಕೆ ʼಮಳ್ಳಿ ಪೆಳ್ಳಿʼ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

ನರೇಶ್‌ ನಾಲ್ಕನೇ ಮದುವೆಯಾಗಿದ್ದಕ್ಕೆ ಭಾರೀ ಟೀಕೆಗೆ ಗುರಿಯಾಗಿದ್ದರು. ಪವಿತ್ರಾ ಲೋಕೇಶ್‌ ಅವರ ನಡೆಯ ಬಗ್ಗೆಯೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಈ ಜೋಡಿ ನಮ್ಮ ಖಾಸಗಿ ಬದುಕಿಗೆ ಗೌರವ ನೀಡಿ ಎಂದಷ್ಟೇ ಮನವಿ ಮಾಡಿ ಸುಮ್ಮನಾಗಿತ್ತು. ಇದೇ ಅಂಶಗಳ ಸುತ್ತ ʼಮಳ್ಳಿ ಪೆಳ್ಳಿʼ ಸಿನಿಮಾ ಮೂಡಿಬಂದಿದೆ. ಒಂದು ನಿಮಿಷದ ಟೀಸರ್‌ನಲ್ಲಿ ಪವಿತ್ರಾ ಮತ್ತು ನರೇಶ್‌ ಅವರ ಪ್ರೀತಿ, ವಿವಾದ ಹಾಗೂ ಮದುವೆಯ ಬಗ್ಗೆ ತೋರಿಸಲಾಗಿದೆ.

ಈ ಸ್ಟಾರ್‌ ದಂಪತಿ ಟೀಕಾಕಾರರಿಗೆ ಉತ್ತರವಾಗಿ ತಾವೇ ಮುಖ್ಯಭೂಮಿಕೆಯಲ್ಲಿ ನಟಿಸಿ, ನಿರ್ಮಿಸಿರುವ ಈ ಚಿತ್ರಕ್ಕೆ ತೆಲುಗಿನ ನಿರ್ದೇಶಕ ಎಂ.ಎಸ್‌ ರಾಜು ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಶರತ್ ಬಾಬು, ಜಯಸುಧಾ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅರುಲ್‌ ದೇವ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರ ಮೇ ತಿಂಗಳಿನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರಕ್ಕೆ ಕನ್ನಡದಲ್ಲಿ ʼಮತ್ತೆ ಮದುವೆʼ ಎಂದು ಹೆಸರಿಡಲಾಗಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...