ಒಟಿಟಿಗೆ ಬರಲು ಸಜ್ಜಾದ ‘ಹೊಂದಿಸಿ ಬರೆಯಿರಿ’

Date:

  • ಭಾವನಾತ್ಮಕ ಕಥಾಹಂದರದ ‘ಹೊಂದಿಸಿ ಬರೆಯಿರಿ
  • ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಯುವ ನಿರ್ದೇಶಕನ ಚಿತ್ರ

ನವೀನ್‌ ಶಂಕರ್‌, ಪ್ರವೀಣ್‌ ತೇಜ್‌ ಮುಖ್ಯಭೂಮಿಕೆಯಲ್ಲಿ ಕಳೆದ ಫೆಬ್ರವರಿಯಲ್ಲಿ ತೆರೆಕಂಡಿದ್ದ ‘ಹೊಂದಿಸಿ ಬರೆಯಿರಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಗಳಿಸಿದ್ದ ಈ ಚಿತ್ರ ಇದೀಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

‘ಹೊಂದಿಸಿ ಬರೆಯಿರಿ’ ಸಿನಿಮಾದ ಡಿಜಿಟಲ್‌ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ಅಮೆಜಾನ್‌ ಪ್ರೈಂ ಭಾರೀ ಮೊತ್ತಕ್ಕೆ ಖರೀದಿ ಮಾಡಿದೆ. ಏಪ್ರಿಲ್‌ 1ರಿಂದ ಚಿತ್ರ ಒಟಿಟಿ ವೇದಿಕೆಯಲ್ಲಿ ಪ್ರಸಾರ ಕಾಣಲಿದೆ ಎಂದು ರಾಮೇನಹಳ್ಳಿ ಜಗನ್ನಾಥ ಅವರೇ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ʼಹೊಂದಿಸಿ ಬರೆಯಿರಿʼ ಸಿನಿಮಾ, ಕಾಲೇಜು ದಿನಗಳ ಸ್ನೇಹ, ಪ್ರೀತಿ, ಬದುಕಿನ ಅನಿಶ್ಚಿತತೆಯ ಸುತ್ತ ಮೂಡಿ ಬಂದಿದೆ. ಭಾವನಾತ್ಮಕ ಕಥಾಹಂದರವುಳ್ಳ ಈ ಚಿತ್ರ ʼಬದುಕು ಬಂದಂತೆ ಸ್ವೀಕರಿಸಿʼ ಎಂಬ ಸಂದೇಶದೊಂದಿಗೆ ಪ್ರೇಕ್ಷಕರಿಗೆ ಹತ್ತಿರವಾಗಿತ್ತು. ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಈ ಚಿತ್ರ ಪ್ರದರ್ಶನ ಕಾಣುತ್ತಿರುವುದು ಗಮನಾರ್ಹ.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ತೊರೆದ ಅಸಲಿ ಕಾರಣ ಬಿಚ್ಚಿಟ್ಟ ಪ್ರಿಯಾಂಕಾ ಚೋಪ್ರಾ

ನವೀನ್‌ ಶಂಕರ್‌, ಪ್ರವೀಣ್‌ ತೇಜ್‌, ಶ್ರೀ ಮಹದೇವ್‌, ಸಂಯುಕ್ತ ಹೊರ್‌ನಾಡ್‌, ಭಾವನಾ ರಾವ್‌, ಐಶಾನಿ ಶೆಟ್ಟಿ, ಅರ್ಚನಾ ಜೋಯಿಸ್‌, ಅನಿರುದ್ಧ್‌ ಆಚಾರ್ಯಾ ಸೇರಿದಂತೆ ಬಹುತಾರಾಗಣವಿರುವ ಈ ಚಿತ್ರವನ್ನು ಸ್ನೇಹಿತರ ನೆರವಿನೊಂದಿಗೆ ನಿರ್ದೇಶಕ ಜಗನ್ನಾಥ ಅವರೇ ನಿರ್ಮಿಸಿದ್ದಾರೆ. ಜೋ ಕೋಸ್ಟಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...