ಸುಶಾಂತ್ ಮಾಜಿ ಮ್ಯಾನೇಜರ್ ಸಾವಿಗೆ ಮಹತ್ವದ ತಿರುವು: 6 ವರ್ಷಗಳ ಬಳಿಕ ಸಿಬಿಐನಿಂದ ಎಫ್‌ಐಆರ್ ದಾಖಲು

Date:

ಬಾಲಿವುಡ್‌ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸೋಮವಾರ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಂಡಿದೆ. ದಿಶಾ ಸಾವನ್ನಪ್ಪಿ 6 ವರ್ಷಗಳ ಬಳಿಕ, ಬಾಂಬೆ ಹೈಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಸಿಬಿಐ ಈ ಮಹತ್ವದ ಹೆಜ್ಜೆ ಇಟ್ಟಿದೆ.

- Advertisement -

​ಕಳೆದ 6 ವರ್ಷಗಳಿಂದ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸದೆ, ಕೇವಲ ‘ಆಕಸ್ಮಿಕ ಸಾವು’ (ADR) ಎಂದು ಪರಿಗಣಿಸಿದ್ದ ಮುಂಬೈ ಪೊಲೀಸರ ಕಾರ್ಯವೈಖರಿಯನ್ನು ಬಾಂಬೆ ಹೈಕೋರ್ಟ್ ಇತ್ತೀಚೆಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಪೊಲೀಸ್ ತನಿಖೆಯಲ್ಲಿ ‘ಎದ್ದುಕಾಣುವ ಲೋಪಗಳಿವೆ’ ಮತ್ತು ಇದು ‘ಉತ್ತರಗಳಿಗಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ದಿಶಾ ಅವರ ತಂದೆ ಸತೀಶ್ ಸಾಲಿಯನ್ ಅವರು ನೀಡಿದ ಹೇಳಿಕೆಯ ಆಧಾರದ ಮೇಲೆ ಭಾನುವಾರ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

​ಈ ಎಫ್‌ಐಆರ್‌ನಲ್ಲಿ ಹತ್ಯೆ, ಸಾಮೂಹಿಕ ಅತ್ಯಾಚಾರ, ಸಾಕ್ಷ್ಯನಾಶ ಹಾಗೂ ಕ್ರಿಮಿನಲ್ ಪಿತೂರಿಯಂತಹ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ಪ್ರಕರಣದ ತನಿಖೆಗೊಳಪಡಿಸಬೇಕಾದವರ ಪಟ್ಟಿಯಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ನಟರಾದ ರಿಯಾ ಚಕ್ರವರ್ತಿ, ಡಿನೋ ಮೋರಿಯಾ ಮತ್ತು ಸೂರಜ್ ಪಾಂಚೋಲಿ ಅವರ ಹೆಸರುಗಳಿವೆ.

ಜೊತೆಗೆ, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್, ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸೇರಿದಂತೆ ಹಲವು ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಲಾಗಿದೆ. ಆದರೆ, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ವಿಚಾರಣೆಗೊಳಪಡುವ ಈ ವ್ಯಕ್ತಿಗಳನ್ನು ‘ಆರೋಪಿ’ ಎಂದು ಪರಿಗಣಿಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

​ದಿಶಾ ಸಾಲಿಯನ್ ಅವರು ಜೂನ್ 8, 2020ರಂದು ಮುಂಬೈನ ಮಲಾಡ್ ಪ್ರದೇಶದ ವಸತಿ ಸಮುಚ್ಚಯದ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಈ ಘಟನೆ ನಡೆದ ಕೇವಲ 6 ದಿನಗಳ ಅಂತರದಲ್ಲಿ (ಜೂನ್ 14, 2020), ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಬಾಂದ್ರಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಎರಡು ಸಾವುಗಳ ನಡುವೆ ಸಂಬಂಧವಿದೆ ಎಂಬ ಊಹಾಪೋಹಗಳು ವ್ಯಾಪಕವಾಗಿ ಹರಿದಾಡಿದ್ದವು.

ಸುಶಾಂತ್ ಸಾವಿನ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಅದೊಂದು ‘ಆತ್ಮಹತ್ಯೆ’ ಎಂದು ತೀರ್ಮಾನಿಸಿ ಮುಕ್ತಾಯ ವರದಿ (Closure report) ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ದಿಶಾ ಪ್ರಕರಣವು 6 ವರ್ಷಗಳ ನಂತರ ಮರುಜೀವ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...