ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್‌ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Date:

Advertisements

ಕ್ರಿಕೆಟ್‌ ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನಾ ಅಲಿಯಾಸ್‌ ರಮ್ಯಾ ಅವರು ಕನ್ನಡದ ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿ, ಅದರ ಮಾತೃ ಸಂಸ್ಥೆ ಹಾಗೂ ವಾಹಿನಿಯ ಮಾಜಿ ಸಂಪಾದಕ ವಿಶ್ವೇಶ್ವರ ಭಟ್‌ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣ ರದ್ದುಪಡಿಸಿಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ರಮ್ಯಾ ಸಲ್ಲಿಸಿದ್ದ ಖಾಸಗಿ ದೂರಿನ ಸಂಜ್ಞೇಯ ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಪ್ರೈ. ಲಿ., ಏಷ್ಯಾನೆಟ್‌ ಸುವರ್ಣಾ ನ್ಯೂಸ್‌ ಮತ್ತು ವಿಶೇಶ್ವರ ಭಟ್‌ ಅಲಿಯಾಸ್‌ ವಿ ಭಟ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

“ಆರೋಪಿತ ವ್ಯಕ್ತಿಗಳು ರಮ್ಯಾ ಅವರ ಘನತೆಗೆ ಹಾನಿಯಾಗುತ್ತದೆ ಎಂಬ ಅರಿವು ಇದ್ದರೂ ಅವರು ಕ್ರಿಕೆಟ್‌ ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಿ ಸುದ್ದಿ ಪ್ರಸಾರ ಮಾಡಿದ್ದಾರೆ ಎಂಬುದು ದೂರುದಾರೆಯ ವಾದವಾಗಿದೆ. ಹೀಗಾಗಿ, ಆರೋಪಿಗಳ ವಿರುದ್ಧ ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್‌ 500ರ ಅಡಿ ವಿಚಾರಣೆ ನಡೆಯುವ ಪ್ರಕರಣವಿಲ್ಲ ಎಂದು ಹೇಳಲಾಗದು” ಎಂದು ನ್ಯಾಯಾಲಯ ಹೇಳಿದೆ.

ರಮ್ಯ

“ಅರ್ಜಿದಾರರು ಐಪಿಸಿ ಸೆಕ್ಷನ್‌ 499ರ ಅಡಿ ನಾಲ್ಕನೇ ವಿನಾಯಿತಿಗೆ ಒಳಪಡಲಿದ್ದಾರೆ. ಹೀಗಾಗಿ, ಅವರ ವಿರುದ್ಧ ಐಪಿಸಿ ಸೆಕ್ಷನ್‌ 500ರ ಅಡಿ ವಿಚಾರಣೆ ನಡೆಸಲಾಗದು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ. ಆದರೆ, ಕ್ರಿಕೆಟ್‌ ಬೆಟ್ಟಿಂಗ್‌ ಅಥವಾ ಸ್ಪಾಟ್‌ ಫಿಕ್ಸಿಂಗ್‌ಗೆ ಸಂಬಂಧಿಸಿದಂತೆ ದೂರುದಾರೆ ಭಾಗಿಯಾಗಿರುವುದರ ಕುರಿತು ಆಕೆಯ ವಿರುದ್ಧ ಯಾವುದಾದರೂ ನ್ಯಾಯಾಲಯದಲ್ಲಿ ಪ್ರಕ್ರಿಯೆ ನಡೆಯುತ್ತಿರುವುದಕ್ಕೆ ಸಂಬಂಧಿಸಿದ ದಾಖಲೆ ಮುಂದಿಡಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಹೈಕೋರ್ಟ್‌ ಅಭಿಪ್ರಾಯಿಸಿದೆ.

“ಐಪಿಸಿ ಸೆಕ್ಷನ್‌ 499ರ ಪ್ರಕಾರ ನ್ಯಾಯಾಲಯದ ಪ್ರಕ್ರಿಯೆ ಅಥವಾ ಅದರ ಫಲಿತಾಂಶದ ಸತ್ಯ ವರದಿ ಪ್ರಸಾರ ಮಾಡುವುದು ಮಾನಹಾನಿಯಲ್ಲ ಎಂಬುದು ನಾಲ್ಕನೇ ವಿನಾಯಿತಿಯಾಗಿದೆ. ಅರ್ಜಿದಾರರು ಐಪಿಸಿ ಸೆಕ್ಷನ್‌ 499ರ ನಾಲ್ಕನೇ ವಿನಾಯಿತಿ ಪ್ರಕಾರ ತಮ್ಮ ವಾದಕ್ಕೆ ಪೂರಕವಾಗಿ ಸೂಕ್ತ ದಾಖಲೆ ಮುಂದಿಡಲು ವಿಫಲರಾಗಿರುವುದರಿಂದ ಅವರ ವಾದವನ್ನು ತಿರಸ್ಕರಿಸಲಾಗಿದೆ. ಅರ್ಜಿದಾರರು ರಮ್ಯಾ ಅವರ ಘನತೆಗೆ ಹಾನಿ ಮಾಡುವ ಉದ್ದೇಶ ಹೊಂದಿದ್ದರೇ ಎಂಬುದು ವಿಚಾರಣೆಯಿಂದ ತಿಳಿದು ಬರಬೇಕಿದ್ದು, ಈ ಹಂತದಲ್ಲಿ ಆ ಕುರಿತು ಯಾವುದೇ ಅಭಿಪ್ರಾಯ ದಾಖಲಿಸಲಾಗದು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನು ಓದಿದ್ದೀರಾ? ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

ಅರ್ಜಿದಾರರ ಪರ ವಕೀಲ ಸುದರ್ಶನ ಸುರೇಶ್‌ ಅವರು, “ಇತರೆ ಮಾಧ್ಯಮ ಸಂಸ್ಥೆಗಳು ಪ್ರಸಾರ ಮಾಡಿದ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ. ದೂರಿನಲ್ಲಿನ ಆರೋಪವು ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ. ಅರ್ಜಿದಾರರಿಗೆ ಐಪಿಸಿ ಸೆಕ್ಷನ್‌ 499 ಅನ್ವಯಿಸಲಿದೆ (ಮಾನಹಾನಿಗೆ ಅನ್ವಯಿಸಲಾಗುವ ಐಪಿಸಿ ಸೆಕ್ಷನ್‌ 499ರ ಅಡಿ ಕೆಲವೊಂದು ವಿನಾಯಿತಿಗಳಿವೆ). ಅದಾಗ್ಯೂ, ರಮ್ಯಾ ಅವರಿಗೆ ಮಾನಹಾನಿ ಮಾಡುವುದು ಉದ್ದೇಶವಾಗಿರಲಿಲ್ಲ” ಎಂದು ವಾದಿಸಿದ್ದರು.

ಪ್ರಕರಣದ ಹಿನ್ನೆಲೆ ಏನು?

2013ರ ಮೇ 31ರಂದು ಕನ್ನಡ ಸಿನಿಮಾ ನಟಿಯರು ಕ್ರಿಕೆಟ್‌ ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಗಳು ಸುದ್ದಿ ಬಿತ್ತರಿಸಿದ್ದು, ಪದೇಪದೇ ತಮ್ಮ ಚಿತ್ರ ಮತ್ತು ವಿಡಿಯೊ ಪ್ರಸಾರ ಮಾಡಿದ್ದಾರೆ. ತಾನು ಹಗರಣದಲ್ಲಿ ಭಾಗಿಯಾಗಿದ್ದೇನೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಆರೋಪಿಗಳ ನಡೆಯಿಂದ ತಮ್ಮ ಘನತೆಗೆ ಗಂಭೀರ ಹಾನಿಯಾಗಿದ್ದು, ಸುದ್ದಿಯ ಖಚಿತತೆಯ ಬಗ್ಗೆ ಚಿತ್ರರಂಗದ ಹಲವು ಪ್ರಶ್ನಿಸಿದ್ದರು ಎಂದು ದೂರಿದ್ದರು.

ಇದರ ಆಧಾರದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ರಮ್ಯಾ ಅವರು ಆರೋಪಿಗಳ ವಿರುದ್ಧ ಮಾನಹಾನಿಗೆ ಅನ್ವಯಿಸುವ ಐಪಿಸಿ ಸೆಕ್ಷನ್‌ 500ರ ಅಡಿ ಕ್ರಮಕೈಗೊಳ್ಳುವಂತೆ ಖಾಸಗಿ ದೂರು ದಾಖಲಿಸಿದ್ದರು. ರಮ್ಯಾ ಅವರ ಹೇಳಿಕೆ ದಾಖಲಿಸಿಕೊಂಡಿದ್ದ ವಿಚಾರಣಾಧೀನ ನ್ಯಾಯಾಲಯವು 2016ರ ಜೂನ್‌ 13ರಂದು ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ...

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್...

Download Eedina App Android / iOS

X